bidar | ಯುವನಿಧಿ ಯೋಜನೆಗೆ ನೋಂದಣಿ ಆರಂಭ
ಬೀದರ್ : ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ನೋಂದಣಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪದವಿ ಪಾಸಾದ ಅಭ್ಯರ್ಥಿಗಳಿಗೆ 3,000 ರೂ., ಡಿಪ್ಲೋಮಾ ಮುಗಿಸಿದ ಅಭ್ಯರ್ಥಿಗಳಿಗೆ 1,500 ರೂ. ಭತ್ಯೆ ನೀಡಲಾಗುತ್ತದೆ. ಪದವಿ ಮತ್ತು ಡಿಪ್ಲೋಮಾ ಮುಗಿಸಿ ಉದ್ಯೋಗವಿಲ್ಲದೆ ಇರುವ ಯುವಕ, ಯುವತಿಯರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
ಆಭ್ಯರ್ಥಿಗಳು ಕನಿಷ್ಠ 6 ವರ್ಷಗಳ ವರಗೆ ಕರ್ನಾಟಕದಲ್ಲಿ ವಾಸವಾಗಿರಬೇಕು. ಪದವಿ, ಡಿಪ್ಲೋಮಾ ಮುಗಿಸಿ ಕನಿಷ್ಠ 180 ದಿನಗಳ ನಂತರವೂ ಉದ್ಯೋಗ ದೊರಕದೆ, ಉನ್ನತ ವ್ಯಾಸಂಗಕ್ಕೆ ದಾಖಲಾಗದೆ ಇರುವ ಅಭ್ಯರ್ಥಿಗಳು ಈ ಯೋಜನೆಗೆ ಅರ್ಹರಾಗಿರುತ್ತಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಸ್ವಯಂ ಉದ್ಯೋಗ ಹೊಂದಿಲ್ಲದ ಅಭ್ಯರ್ಥಿಗಳು, ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವ ಅಭ್ಯರ್ಥಿಗಳು, 2023-24ರಿಂದ ಪಾಸಾದ (ತೇರ್ಗಡೆಯಾದ) ಅಭ್ಯರ್ಥಿಗಳು ಯುವನಿಧಿ ಯೋಜನೆಯಲ್ಲಿ ನೋಂದಣಿ ಮಾಡಿಕೊಂಡು ಇದರ ಉಪಯೋಗ ಪಡೆದುಕೋಳ್ಳಬೇಕು. ಅಭ್ಯರ್ಥಿಗಳು ನೋಂದಣಿಯನ್ನು ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬಾಪೂಜಿ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.