×
Ad

ಬೀದರ್ | ಯರನಳ್ಳಿ ಗ್ರಾಮಕ್ಕೆ ಹೊಸ ಬಸ್ ವ್ಯವಸ್ಥೆ ಕಲ್ಪಿಸಲು ಮನವಿ

Update: 2025-09-19 18:35 IST

ಬೀದರ್: ನಗರದ ಹಳೆ ಬಸ್ ನಿಲ್ದಾಣದಿಂದ ಅಲಿಯಂಬರ್ ಮಾರ್ಗವಾಗಿ ಯರನಳ್ಳಿ ಗ್ರಾಮಕ್ಕೆ ಹೊಸ ಬಸ್ ಸೇವೆ ಪ್ರಾರಂಭಿಸುವಂತೆ ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ನಿಗ್ರಹ ಸಮಿತಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗೆ ಮನವಿ ಸಲ್ಲಿಸಿದೆ.

ಮನವಿ ಪತ್ರದಲ್ಲಿ, ಯರನಳ್ಳಿ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವಿದ್ದು, ಪ್ರತಿದಿನ ಸಾಕಷ್ಟು ಜನರು ಈ ಊರಿಗೆ ಪ್ರಯಾಣ ಮಾಡುತ್ತಿದ್ದಾರೆ. ಆದರೆ ಬಸ್ ವ್ಯವಸ್ಥೆ ಇಲ್ಲದಿರುವುದರಿಂದ ಗ್ರಾಮಸ್ಥರಿಗೆ ತೊಂದರೆ ಆಗುತ್ತಿದೆ ಎಂದು ಹೇಳಲಾಗಿದೆ. ಅಲಿಯಂಬರ್–ಮಮದಾಪುರ್ ಮಾರ್ಗದ ಬಸ್ಸಿನಲ್ಲಿ ಹೆಚ್ಚು ಸಂಖ್ಯೆಯಲ್ಲಿ ಜನ ಪ್ರಯಾಣ ಮಾಡುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಹೆಚ್ಚಾಗಿದೆ. ಹೀಗಾಗಿ ಅಲಿಯಂಬರ್–ಯರನಳ್ಳಿ ನಡುವೆ ನೇರ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಲಾಗಿದೆ.

ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ, ಬೀದರ್‌ನಿಂದ ಜನವಾಡ ಹಾಗೂ ಅಲಿಯಂಬರ್ ಮಾರ್ಗವಾಗಿ ಯರನಳ್ಳಿ ಗ್ರಾಮಕ್ಕೆ ದಿನವಿಡೀ ಬಸ್ ಓಡಾಡುವ ವ್ಯವಸ್ಥೆ ಕಲ್ಪಿಸಬೇಕೆಂದು ಮನವಿ ಮಾಡಲಾಗಿದೆ.

ಈ ವೇಳೆ ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ನಿಗ್ರಹ ಸಮಿತಿಯ ವಿಭಾಗೀಯ ಪ್ರಮುಖ ಸಂಗಮೇಶ್ ಭಾವಿದೊಡ್ಡಿ, ಜಿಲ್ಲಾಧ್ಯಕ್ಷ ವಿಶಾಲ್ ದೊಡ್ಡಿ, ದತ್ತು ಬಾವಗೆ, ಸ್ಥಳೀಯ ಯುವಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News