×
Ad

ಬೀದರ್ | ಘನತ್ಯಾಜ್ಯ ವಿಲೇವಾರಿ ವಾಹನಗಳ ಚಾಲಕಿಯರಿಗೆ ವೇತನ, ಸರಕಾರದ ಸೌಲಭ್ಯ ಒದಗಿಸಲು ಮನವಿ

Update: 2025-01-28 16:12 IST

ಬೀದರ್ : ಗ್ರಾಮ ಪಂಚಾಯತ್ ನಲ್ಲಿ ದಿನನಿತ್ಯ ಘನತ್ಯಾಜ್ಯ ವಿಲೇವಾರಿ ವಾಹನಗಳ ಚಾಲಕಿಯರಿಗೆ ವೇತನ ಮತ್ತು ಸರಕಾರದ ಸೌಲಭ್ಯಗಳನ್ನು ಒದಗಿಸಿಕೊಡಬೇಕು ಎಂದು ಕರ್ನಾಟಕ ಚಾಲಕರ ಒಕ್ಕೂಟ ಒತ್ತಾಯಿಸಿದೆ.

ಇಂದು ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು, ಜಿಲ್ಲಾಧಿಕಾರಿಗಳ ಮೂಲಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐ.ಟಿ ಮತ್ತು ಬಿ. ಟ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಹಲವಾರು ವರ್ಷಗಳಿಂದ ಜಿಲ್ಲಾದ್ಯಂತ ಗ್ರಾಮ ಪಂಚಾಯತ್ ನಲ್ಲಿ ದಿನನಿತ್ಯದ ಘನತ್ಯಾಜ್ಯ ವಸ್ತು ವಿಲೇವಾರಿ ವಾಹನಗಳ ಚಾಲಕೀಯರನ್ನು ನೇಮಕ ಮಾಡಿಕೊಳ್ಳಲಾಗಿದೆ. ಆದರೆ ಹಲವಾರು ತಿಂಗಳಿಂದ ವೇತನ ನೀಡದೆ ಕೆಲಸ ನಿರ್ವಹಿಸಿಕೊಂಡು ಬರಲಾಗುತ್ತಿದೆ ಎಂದು ದೂರಿದ್ದರು.

ನಮ್ಮನ್ನು ಕೆಲಸಕ್ಕೆ ನೇಮಕ ಮಾಡಿಕೊಳ್ಳುವ ಮೋದಲು ವೇತನ ನೀಡಲಾಗುತ್ತದೆ ಎಂದು ಅಶ್ವಾಸನೆ ನೀಡಿದ್ದಾರೆ. ಆದರೆ ನಮಗೆ ಸರಿಯಾದ ಸಮಯಕ್ಕೆ ವೇತನ ನೀಡುತ್ತಿಲ್ಲ. ಸರಿಯಾದ ಸೌಲಭ್ಯಗಳು ಕೂಡ ನಮಗೆ ದೊರಕುತ್ತಿಲ್ಲ. ಗ್ರಾಮ ಪಂಚಾಯತ್ ಅಧ್ಯಕ್ಷರಾಗಲಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಲಿ ಇದರ ಬಗ್ಗೆ ಯಾವುದೇ ರೀತಿಯ ಉತ್ತರ ನೀಡುತಿಲ್ಲ. ನಾವು ಪ್ರತಿಯೊಬ್ಬರ ಮನೆ ಮುಂದೆ ಹೋಗಿ 30 ರಿಂದ 100 ರೂ. ಧನ ಸಹಾಯ ಪಡೆಯಬೇಕು. ಆ ಧನ ಸಹಾಯದಿಂದ ಬರುವ ಹಣವೇ ನಿಮ್ಮ ವೇತನವಾಗಿರುತ್ತದೆ ಎಂದು ಹೇಳುತ್ತಿದ್ದಾರೆ ಎಂದು ಆರೋಪಿಸಿದರು.

ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶ ಮಾಡಿ ಆದಷ್ಟು ಬೇಗ ಈ ಮೇಲಿನ ಎಲ್ಲಾ ಸಮಸ್ಯೆಗಳು ಪರಿಹರಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯಧ್ಯಕ್ಷ ನಾರಾಯಣ ಸ್ವಾಮಿ, ರಾಜ್ಯ ಉಪಾಧ್ಯಕ್ಷ ಗುರುಮೂರ್ತಿ, ರುದ್ರೇಶ್, ಪುಟ್ಟರಾಜು, ಮಂಜಾಗೌಡ, ಅರಸು, ಟಿ.ಮಂಜೇಗೌಡ, ಜಿಲ್ಲಾಧ್ಯಕ್ಷ ಹುಲೆಪ್ಪ, ಮಹಿಳಾ ಘಟಕದ ಜಿಲ್ಲಾಧ್ಯಕ್ಷ ಸ್ನೇಹ, ರೇಣುಕಾ ಸೇರಿದಂತೆ ಅನೇಕ ಮಹಿಳೆಯರು ಭಾಗವಹಿಸಿದ್ದರು.

 

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News