ಬೀದರ್: ರಸ್ತೆ ಅಪಘಾತ; ಗಾಯಗೊಂಡಿದ್ದ ಮಹಿಳೆ ಮೃತ್ಯು
Update: 2025-02-05 12:04 IST
ಬೀದರ್ : ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಜಿಲ್ಲೆಯ ಭಾಲ್ಕಿಯಲ್ಲಿ ನಡೆದಿದೆ.
ಕೆರೂರ್ ಗ್ರಾಮದ ನಿವಾಸಿ ಸುನೀತಾ ಬಿರಾದಾರ್ ಮೃತ ಮಹಿಳೆ.
ರವಿವಾರ ಭಾಲ್ಕಿ ತಾಲ್ಲೂಕಿನ ಹಲಬರ್ಗಾ ಸಮೀಪದ ಪೆಟ್ರೋಲ್ ಪಂಪ್ ಬಳಿ ಸ್ಕೂಟಿಯೊಂದು ಸುನೀತಾ ಅವರಿಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಬೀದರ್ ನ ಖಾಸಗಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳವಾರ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮಹಿಳೆಯು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಘಟನೆಗೆ ಸಂಬಂಧಿಸಿದಂತೆ ಧನ್ನೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.