×
Ad

ಬೀದರ್ | ಸ್ತ್ರೀ ಸಬಲೀಕರಣಕ್ಕೆ ಶಕ್ತಿ ಯೋಜನೆ ಸಹಾಯಕವಾಗಿದೆ : ಅಮೃತರಾವ್ ಚಿಮಕೋಡೆ

Update: 2025-07-14 16:56 IST

ಬೀದರ್ : ಸ್ತ್ರೀಯರ ಸಬಲೀಕರಣಕ್ಕೆ ಶಕ್ತಿ ಯೋಜನೆ ಸಹಾಯಕವಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ್ ಚಿಮಕೋಡೆ ಅವರು ತಿಳಿಸಿದರು.

ಇಂದು ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ಶಕ್ತಿ ಯೋಜನೆಯ ಮೂಲಕ ರಾಜ್ಯದಲ್ಲಿ 500 ಕೋಟಿ ಮಹಿಳೆಯರು ಉಚಿತ ಬಸ್ ಪ್ರಯಾಣ ಮಾಡಿರುವ ಸಲುವಾಗಿ ಪೂಜೆ ಸಲ್ಲಿಸಿ, ಸಿಹಿ ಹಂಚಿ ಅವರು ಮಾತನಾಡಿದರು.

ಶಕ್ತಿ ಯೋಜನೆಯಿಂದ ಮಹಿಳೆಯರು ಉಚಿತವಾಗಿ ಪ್ರವಾಸಿ ತಾಣಗಳಿಗೆ, ಧಾರ್ಮಿಕ ಸ್ಥಳಗಳಿಗೆ ಮತ್ತು ವ್ಯಾಪಾರ ವಹಿವಾಟುಗಳಿಗಾಗಿ ಪ್ರಯಾಣ ಮಾಡಬಹುದು. ಪ್ರಯಾಣದಿಂದ ಉಳಿದ ಹಣ ದೈನಂದಿನ ಜೀವನಕ್ಕೆ ಬಳಸಬಹುದಾಗಿದೆ. ಇದರಿಂದಾಗಿ ಮಹಿಳೆಯರು ಪುರುಷರ ಮೇಲೆ ಎಲ್ಲದಕ್ಕೂ ಅವಲಂಬಿತವಾಗಿರುವುದನ್ನು ತಪ್ಪಿಸಬಹುದು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಮಾತನಾಡಿ, ಶಕ್ತಿ ಯೋಜನೆಯಿಂದ ಮಹಿಳೆಯರು ಹೆಚ್ಚಿನ ಪ್ರಮಾಣದಲ್ಲಿ ಪ್ರಯಾಣ ಮಾಡಲು ಅನುಕೂಲವಾಗಿದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗಿರೀಶ್ ಬದೋಲೆ ಮಾತನಾಡಿ, ಶಕ್ತಿ ಯೋಜನೆಯಲ್ಲಿ ಉಚಿತವಾಗಿ ಪ್ರಯಾಣ ಮಾಡಿರುವ ಮಹಿಳೆಯರ ಮುಖದಲ್ಲಿ ಸಂತಸ ಕಾಣಬಹುದಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಮುಹಮ್ಮದ್ ಗೌಸ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪೂಜಾ ಜಾರ್ಜ್, ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಕಾಂತ್ ಪುಲೇಕರ್, ವಿಭಾಗೀಯ ಸಂಚಾರಿ ಅಧಿಕಾರಿ ಇಂದ್ರಸೇನ್ ಎಂ. ಬಿರಾದಾರ್, ಬೀದರ್ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಡಿ.ರಿಯಾಝ್‌ ಹಾಗೂ ಉಪಾಧ್ಯಕ್ಷ ರಾಜಕುಮಾರ್ ಮಡಿಗೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News