ಬೀದರ್ | ಡಿಸಿಇಟಿ ಪರೀಕ್ಷೆಯಲ್ಲಿ 225ನೇ ರ‍್ಯಾಂಕ್ ಪಡೆದ ಶಿಂಧೆ ಸುಧೀರ್
ಬೀದರ್ : ಔರಾದ್ (ಬಾ) ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಶಿಂಧೆ ಸುಧೀರ್ ಅವರು ಡಿ.ಸಿಇಟಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 225ನೇ ರ‍್ಯಾಂಕ್ ಪಡೆದು ಉತ್ತಮ ಸಾಧನೆ ಮಾಡಿದ್ದು ಖುಷಿ ತಂದಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಸಂಜೀವಕುಮಾರ್ ಡಿ. ಅವರು ಅಭಿನಂದನೆ ವ್ಯಕ್ತಪಡಿಸಿದ್ದಾರೆ.
ಪ್ರಸಕ್ತ ಸಾಲಿನಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದು, ದೇಶದ ಪ್ರತಿಷ್ಠಿತ ಕಂಪನಿಗಳಲ್ಲಿ ವಿದ್ಯಾರ್ಥಿಗಳು ಕೆಲಸ ಪಡೆದಿದ್ದು ಹೆಮ್ಮೆಯ ವಿಷಯವಾಗಿದೆ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಇದು ಪ್ರೇರಣೆಯಾಗಿ ಹೊರ ಹೊಮ್ಮುತ್ತದೆ ಎಂದು ತಿಳಿಸಿದ್ದಾರೆ.
ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್, ಅಲ್ಟರ್‌ನೆಟ್ ಎನರ್ಜಿ ಇಂಜಿನಿಯರಿಂಗ್, ಆಟೋಮೆಷನ್ ಮತ್ತು ರೊಬೊಟಿಕ್ಸ್ ಇಂಜಿನಿಯರಿಂಗ್ ಹಾಗೂ ಕಮರ್ಷಿಯಲ್ ಪ್ರಾಕ್ಟೀಸ್ ಇನ್ ಕನ್ನಡ ಕೋರ್ಸ್ ಗಳು ಲಭ್ಯವಿದ್ದು, ಗ್ರಾಮೀಣ ವಿದ್ಯಾರ್ಥಿಗಳಿಗೆ ಉದ್ಯೋಗ ಹಾಗೂ ಉನ್ನತ ತಾಂತ್ರಿಕ ಶಿಕ್ಷಣದ ಪೂರಕ ವಾತಾವರಣ ಒದಗಿಸಲಾಗಿದೆ. ಪ್ರಥಮ ಸೆಮಿಸ್ಟರ್ ನ ದಾಖಲಾತಿ ಪ್ರಕ್ರಿಯೆ ಈಗಾಗಲೇ ಚಾಲ್ತಿಯಲ್ಲಿದ್ದು, ಕೆಲವೇ ಸೀಟುಗಳು ಖಾಲಿ ಇವೆ. ಆದ್ದರಿಂದ ವಿದ್ಯಾರ್ಥಿಗಳು ದಾಖಲಾತಿ ಪಡೆದು ಕಾಲೇಜಿನ ಪ್ರಯೋಜನ ಪಡೆಯಬೇಕು ಎಂದು ಅವರು ಮಾಹಿತಿ ನೀಡಿದ್ದಾರೆ.