ಬೀದರ್ | ಅಪರ ಜಿಲ್ಲಾಧಿಕಾರಿಯಾಗಿ ಶಿವಾನಂದ್ ಬಿ.ಕರಾಳೆ ಅಧಿಕಾರ ಸ್ವೀಕಾರ
Update: 2025-08-04 20:21 IST
ಬೀದರ್ : ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಶಿವಾನಂದ್ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ ಮಾಡಿದರು.
ಹಿಂದಿನ ಪ್ರಭಾರಿ ಅಪರ ಜಿಲ್ಲಾಧಿಕಾರಿ ಸುರೇಖಾ ಅವರು ಶಿವಾನಂದ್ ಬಿ.ಕರಾಳೆ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಶಿವಾನಂದ್ ಬಿ.ಕರಾಳೆ ಅವರು 2010ನೇ ಸಾಲಿನ ಕೆಎಎಸ್ ಅಧಿಕಾರಿಯಾಗಿದ್ದು, ಈ ಹಿಂದೆ ಕಾರವಾರ ಜಿಲ್ಲೆಯ ಸಹಾಯಕ ಆಯುಕ್ತರಾಗಿ ಹಾಗೂ ಗದಗ, ಧಾರವಾಡ ಮತ್ತು ತುಮಕೂರು ಜಿಲ್ಲೆಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.