ಬೀದರ್ | ಆಮ್ ಆದ್ಮಿ ಪಕ್ಷದ ಬೀದರ್ ಜಿಲ್ಲಾಧ್ಯಕ್ಷರಾಗಿ ಸಿದ್ದು ಫುಲಾರಿ ನೇಮಕ
Update: 2026-01-19 22:45 IST
ಬೀದರ್ : ಆಮ್ ಆದ್ಮಿ ಪಕ್ಷ ಕರ್ನಾಟಕ ಘಟಕದ ವತಿಯಿಂದ ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಲಾಗಿದ್ದು, ಬೀದರ್ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ಸಿದ್ದು ಫುಲಾರಿ ಅವರು ನೇಮಕವಾಗಿದ್ದಾರೆ.
ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಅವರ ಅನುಮೋದನೆಯೊಂದಿಗೆ ಬೀದರ್ ಜಿಲ್ಲಾಧ್ಯಕ್ಷರಾಗಿ ಸಿದ್ದು ಫುಲಾರಿ ಅವರನ್ನು ನೇಮಕ ಮಾಡಲಾಗಿದೆ ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಚಿತ ಸಹಾನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.