×
Ad

Bidar | ಹಾವು ಕಡಿತ: ಚಿಕಿತ್ಸೆ ಫಲಿಸದೆ ಮಹಿಳೆ ಮೃತ್ಯು

Update: 2026-06-04 20:47 IST

ಕವಿತಾ ಕಾಂಬಳೆ 

ಬೀದರ್: ಹಾವು ಕಡಿತಕ್ಕೆ ಒಳಗಾದ ಮಹಿಳೆಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಭಾಲ್ಕಿ ತಾಲೂಕಿನ ಡಾವರಗಾಂವ್ ಗ್ರಾಮದಲ್ಲಿ ನಡೆದಿದೆ.

ಡಾವರಗಾಂವ್ ಗ್ರಾಮದ ಕವಿತಾ ಕಾಂಬಳೆ (43) ಮೃತಪಟ್ಟ ಮಹಿಳೆಯಾಗಿದ್ದಾರೆ.

ಕವಿತಾ ಅವರು ಮೇ. 16ರಂದು ಬೇರೆಯವರ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಹಾವು ಕಡಿದಿತ್ತು.

ಅವರನ್ನು ಸರ್ಕಾರಿ ವೈದ್ಯರ ಸಲಹೆ ಮೇರೆಗೆ ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಸಾಗಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಜೂ. 2 ರಂದು ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಘಟನೆಗೆ ಸಂಬಂಧಿಸಿದಂತೆ ಖಟಕ್ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News