×
Ad

Bidar | ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ : ವಿವಿಧೆಡೆಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಭೇಟಿ

Update: 2026-07-01 18:20 IST

ಬೀದರ್ : ಜಿಲ್ಲಾದ್ಯಂತ ನಡೆಯುತ್ತಿರುವ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕಾರ್ಯದ ಅಂಗವಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾ ಶರ್ಮಾ ಅವರು ಬುಧವಾರ ಕಾಡವಾದ್ ಮತ್ತು ಕಮಠಾಣ ಗ್ರಾಮಗಳಿಗೆ ಭೇಟಿ ನೀಡಿ ಎನುಮರೇಷನ್ ಫಾರ್ಮ್ ವಿತರಣಾ ಕಾರ್ಯವನ್ನು ಪರಿಶೀಲಿಸಿದರು.

ಈ ವೇಳೆ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಬಿಎಲ್‌ಒಗಳು ಜುಲೈ 29ರವರೆಗೆ ಮನೆ-ಮನೆಗೆ ಭೇಟಿ ನೀಡಿ ಎನುಮರೇಷನ್ ನಮೂನೆಗಳನ್ನು ವಿತರಿಸುತ್ತಿದ್ದಾರೆ. ಮತದಾರರು ಅಗತ್ಯ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ ನಮೂನೆಗಳನ್ನು ಬಿಎಲ್‌ಒಗಳಿಗೆ ಸಲ್ಲಿಸುವ ಮೂಲಕ ಈ ಪ್ರಕ್ರಿಯೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲೆಯಲ್ಲಿ ಒಟ್ಟು 1,528 ಮತಗಟ್ಟೆಗಳಿದ್ದು, 14,61,959 ಮತದಾರರಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆ ಪ್ರಜಾಪ್ರಭುತ್ವದ ಅತ್ಯಂತ ಮಹತ್ವದ ಪ್ರಕ್ರಿಯೆಯಾಗಿದ್ದು, ಸಾರ್ವಜನಿಕರು ಹಾಗೂ ರಾಜಕೀಯ ಪಕ್ಷಗಳು ಅಧಿಕಾರಿಗಳಿಗೆ ಅಗತ್ಯ ಸಹಕಾರ ನೀಡಬೇಕು ಎಂದು ತಿಳಿಸಿದರು.

ಜಿಲ್ಲಾದ್ಯಂತ ಎಸ್‌ಐಆರ್ ಜಾಗೃತಿ ಅಭಿಯಾನ ತೀವ್ರಗೊಂಡಿದ್ದು, ತಹಶೀಲ್ದಾರರು, ಗ್ರಾಮ ಪಂಚಾಯಿತಿಗಳು ಹಾಗೂ ಕಾಲೇಜುಗಳು ವ್ಯಾಪಕ ಪ್ರಚಾರ ನಡೆಸುತ್ತಿವೆ. ಇದುವರೆಗೆ 70,359 ಎನುಮರೇಷನ್ ಫಾರ್ಮ್‌ಗಳನ್ನು ವಿತರಿಸಲಾಗಿದ್ದು, 2,073 ಅರ್ಜಿಗಳ ಮಾಹಿತಿಯನ್ನು ಡೇಟಾ ಎಂಟ್ರಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಸ್ವೀಪ್ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗೀರಿಶ್ ಬದೋಲೆ ಅವರು ನಗರದ ಗಣ್ಯರ ಮನೆಗಳಿಗೆ ಭೇಟಿ ನೀಡಿ ಎನುಮರೇಷನ್ ಫಾರ್ಮ್ ವಿತರಿಸಿ, ನಮೂನೆ ಭರ್ತಿ ವಿಧಾನ, ಅಗತ್ಯ ದಾಖಲೆಗಳು ಹಾಗೂ ನಿಗದಿತ ಅವಧಿಯೊಳಗೆ ಸಲ್ಲಿಸುವ ಕುರಿತು ಜಾಗೃತಿ ಮೂಡಿಸಿದರು.

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News