×
Ad

ಬೀದರ್ | ಎಸೆಸೆಲ್ಸಿ ಪರೀಕ್ಷೆ: ಸರಕಾರಿ ಬಾಲಕಿಯರ ಬಾಲಮಂದಿರದ ವಿದ್ಯಾರ್ಥಿನಿಯರು ಉತ್ತಮ ಸಾಧನೆ

Update: 2025-05-03 17:42 IST

ಬೀದರ್ : ಜಿಲ್ಲೆಯ ಸರಕಾರಿ ಬಾಲಕಿಯರ ಬಾಲ ಮಂದಿರದ ವಿದ್ಯಾರ್ಥಿನಿಯರು ಎಸೆಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಥಿನಿಯರಾದ ಸ್ಫೂರ್ತಿ 625 ಕ್ಕೆ 540 ಅಂಕ ಹಾಗೂ ಗಾಯತ್ರಿ 625ಕ್ಕೆ 501 ಅಂಕ ಪಡೆದು ಸಾಧನೆಗೈದಿದ್ದಾರೆ. ಇವರು ಕಳೆದ 5 ವರ್ಷಗಳಿಂದ ಸಂಸ್ಥೆಯಲ್ಲಿ ಆಶ್ರಯ ಪಡೆದಿದ್ದು, ಮೈಲೂರಿನ ಸರಕಾರಿ ಪ್ರೌಢ ಶಾಲೆ ವಿದ್ಯಾಭ್ಯಾಸ ಮಾಡಿದ್ದಾರೆ. ಈ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರಕಾರವು ಮಕ್ಕಳ ರಕ್ಷಣಾ ನಿರ್ದೇಶನಾಲಯದಿಂದ ರಾಜ್ಯದಲ್ಲಿ ಅನಾಥ, ನಿರ್ಲಕ್ಷಕ್ಕೋಳಗಾದ, ಪರಿತ್ಯಜಿಸಲ್ಪಟ್ಟ ಕುಟುಂಬದಿಂದ ಬೇರ್ಪಟ್ಟ, ಬಾಲ ಕಾರ್ಮಿಕತೆ, ಬಾಲ್ಯ ವಿವಾಹ, ಪೋಕ್ಸೋ ಹಾಗೂ ಇನ್ನಿತರೆ ದೌರ್ಜನ್ಯ ಮತ್ತು ಶೋಷಣೆಗೊಳಗಾದ ಮಕ್ಕಳ ಪಾಲನೆ, ಪೋಷಣೆ, ರಕ್ಷಣೆ ಮತ್ತು ಪುನರ್ವಸತಿಗಾಗಿ ಪ್ರತ್ಯೇಕವಾಗಿ ಸರಕಾರಿ ಬಾಲಕಿಯರ ಮತ್ತು ಬಾಲಕರ ಬಾಲಮಂದಿರಗಳನ್ನು ಸ್ಥಾಪಿಸಿದೆ ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News