×
Ad

ಬೀದರ್ | ಎಸೆಸೆಲ್ಸಿ ಪರೀಕ್ಷೆ: ವಿಸ್ಡಂ ಪ್ರೌಢ ಶಾಲೆಗೆ ಉತ್ತಮ ಫಲಿತಾಂಶ

Update: 2025-05-02 19:44 IST

ಬೀದರ್ : ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ವಿಸ್ಡಂ ಪ್ರೌಢ ಶಾಲೆಗೆ ಉತ್ತಮ ಫಲಿತಾಂಶ ಬಂದಿದೆ ಎಂದು ಶಾಲೆಯ ಮುಖ್ಯೋಪಾಧ್ಯಯ ಮುಹಮ್ಮದ್ ಸಲೀಮ್ ಅವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಈ ಸಾಲಿನ ಎಸೆಸೆಲ್ಸಿ ಪರೀಕ್ಷೆ 1ರಲ್ಲಿ ಉತ್ತಮ ಫಲಿತಾಂಶ ಬಂದಿದ್ದು, ವಿದ್ಯಾರ್ಥಿಗಳಾದ ಓವೇಸ್ ಅಹ್ಮದ್ ಅವರು ಶೇ.97.12 ಪ್ರತಿಶತ ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ನೈಯೀಲಾ ಅರೀಬ್ ಶೇ.94.72 ಪ್ರತಿಶತ ಅಂಕ ಪಡೆದು ಶಾಲೆಗೆ ದ್ವೀತಿಯ ಸ್ಥಾನವನ್ನು ಪಡೆದಿದ್ದಾರೆ. ಇನ್ನುಳಿದಂತೆ 20 ವಿದ್ಯಾರ್ಥಿಗಳು ಅಗ್ರ ಶ್ರೇಣಿ, 39 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ 14 ವಿದ್ಯಾರ್ಥಿಗಳು ದ್ವೀತಿಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಕನ್ನಡ, ವಿಜ್ಞಾನ, ಹಿಂದಿ, ಉರ್ದು ವಿಷಯಗಳಲ್ಲಿ 6 ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು 100 ಕ್ಕೆ 100 ಅಂಕ ಪಡೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇದರ ಬಗ್ಗೆ ವಿಸ್ಡಂ ಸಂಸ್ಥೆಯ ಅಧ್ಯಕ್ಷ ಮುಹಮ್ಮದ್ ಆಸಿಫೋದ್ದಿನ್, ಕಾರ್ಯದರ್ಶಿಗಳಾದ ಮುಹಮ್ಮದ್ ಸಲಾಹುದ್ದೀನ್‌, ಫರ್ಹಾನ್ ಸೇರಿದಂತೆ ಶಾಲೆಯ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News