×
Ad

ಬೀದರ್ | ವಿದ್ಯಾರ್ಥಿಗಳು ಓದಿನೊಂದಿಗೆ ನಿರಂತರವಾಗಿ ಕ್ರೀಡೆಗಳಲ್ಲಿ ಭಾಗಹಿಸಬೇಕು : ಶಾಸಕ ಪ್ರಭು ಚೌವ್ಹಾಣ್

Update: 2025-08-26 19:47 IST

ಬೀದರ್ : ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ವಿದ್ಯಾರ್ಥಿಗಳು ಓದಿನೊಂದಿಗೆ ನಿರಂತರವಾಗಿ ಕ್ರೀಡೆಗಳಲ್ಲಿ ಭಾಗಹಿಸಬೇಕು ಎಂದು ಶಾಸಕ ಪ್ರಭು ಚೌವ್ಹಾಣ್ ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಔರಾದ್ ನ ಅಮರೇಶ್ವರ ಕಾಲೇಜು ಆವರಣಲ್ಲಿ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಅಮರೇಶ್ವರ ಪದವಿ ಪೂರ್ವ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ 2025-26ನೇ ಸಾಲಿನ ತಾಲೂಕು ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಕೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ಯುವಜನತೆ ಕ್ರಿಕೆಟ್‌ಗೆ ಮಾತ್ರ ಹೆಚ್ಚಿನ ಮಹತ್ವ ನೀಡುತ್ತಿರುವುದು ಕಂಡುಬರುತ್ತಿದೆ. ಇದರ ಬದಲಾಗಿದೆ ನಮ್ಮ ದೇಶೀಯ ಆಟಗಳಾದ ಕಬ್ಬಡ್ಡಿ, ಕುಸ್ತಿ, ಖೋಖೋ ದಂತಹ ವಿವಿಧ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಬೇಕು. ಪ್ರಧಾನಿ ನರೇಂದ್ರ ಮೋದಿಯವರು ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದಾರೆ. ಖೇಲೋ ಇಂಡಿಯಾದಂತಹ ಹತ್ತು ಹಲವು ಯೋಜನೆಗಳು ವಿದ್ಯಾರ್ಥಿಗಳಿಗೆ ಸಾಕಷ್ಟು ಅನುಕೂಲಕರವಾಗಿದ್ದು, ಯುವಕರು ಇವುಗಳ ಸದುಪಯೋಗ ಪಡೆದು ತಾಲೂಕು, ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗೆದ್ದು ಹೆಸರು ಗಳಿಸಬೇಕು ಎಂದರು.

ಈ ಸಂದರ್ಭದಲ್ಲಿ ಆರ್ ಆರ್ ಕೆ ಸಮಿತಿಯ ಅಧ್ಯಕ್ಷ ಪ್ರಫುಲಕುಮಾರ್ ಪಾಂಡೆ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಉಪ ನಿರ್ದೇಶಕ ಚಂದ್ರಕಾಂತ್ ಶಹಾಬಾದಕರ್, ಜಿಲ್ಲಾ ಪ್ರಾಂಶುಪಾಲ ಸಂಘದ ಅಧ್ಯಕ್ಷ ಪ್ರಭು.ಎಸ್, ಕಾರ್ಯಾಧ್ಯಕ್ಷ ಡಾ.ಮನ್ಮಥ್ ಡೋಳೆ, ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಓಂಕಾರ್ ಸೂರ್ಯವಂಶಿ, ಜಿಲ್ಲಾ ಅನುದಾನಿತ ಉಪನ್ಯಾಸಕರ ಸಂಘದ ಅಧ್ಯಕ್ಷ ವಿಜಯಕುಮಾರ್ ಪಾಟೀಲ್, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಓಂಪ್ರಕಾಶ ದಡ್ಡೆ ಹಾಗೂ ಅಮರೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರೇವಣಯ್ಯಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News