ಬೀದರ್: ಸಂಸತ್ತಿನಲ್ಲಿ ಸಕಾರಾತ್ಮಕವಾಗಿ ಹೇಗೆ ಚರ್ಚೆ ನಡೆಸಬೇಕು ಎಂಬುದರ ಕುರಿತು ವಿದ್ಯಾರ್ಥಿಗಳು ಜ್ಞಾನ ಪಡೆದುಕೊಳ್ಳಬೇಕು ಎಂದು ತಹಶೀಲ್ದಾರ್ ರವೀಂದ್ರ ದಾಮ ಅವರು ಹೇಳಿದರು.

ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ‘ಯುವ ಸಂಸತ್ತು’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಮಸ್ಯೆಗಳು ಹಾಗೂ ಪ್ರಶ್ನೆಗಳಿಗೆ ಪರಿಹಾರ ಕಂಡುಕೊಳ್ಳುವ ಮೂಲಕ ಸರ್ಕಾರದ ಯೋಜನೆಗಳ ನೆರವಿನಿಂದ ಅಭಿವೃದ್ಧಿ ಕಾರ್ಯಗಳನ್ನು ಹೇಗೆ ಸಾಧಿಸಬಹುದು ಎಂಬುದನ್ನು ಯುವಕರು ಅರಿಯಬೇಕು ಎಂದು ಹೇಳಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ್ ಪಾಟೀಲ್ ಮಾತನಾಡಿ, ಶಿಕ್ಷಣ, ಆಹಾರ ಕಲಬೆರಕೆ, ಹಣದುಬ್ಬರ, ಮಕ್ಕಳ ಅಭಿವೃದ್ಧಿ ಹಾಗೂ ಗ್ರಾಮೀಣಾಭಿವೃದ್ಧಿ ಪ್ರಮುಖ ವಿಷಯಗಳಾಗಿವೆ. ವಿದ್ಯಾರ್ಥಿಗಳು ಯುವ ಸಂಸತ್ ವೇದಿಕೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ, ಈ ವಿಷಯಗಳ ಕುರಿತು ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಸಂಜುಕುಮಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಯುವ ಸಂಸತ್ತಿಗೆ ಆಯ್ಕೆಯಾದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor