ಬೀದರ್: ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅರ್ಹ ಮತದಾರರು ಫಾರ್ಮ್-18 ಮತ್ತು ಫಾರ್ಮ್-19 ಅರ್ಜಿಗಳನ್ನು ಭರ್ತಿ ಮಾಡಿ ಆಯಾ ತಹಸೀಲ್ದಾರ್ ಕಚೇರಿಗೆ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿ ಸುರೇಖಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಅರ್ಹತಾ ದಿನಾಂಕ ನವೆಂಬರ್ 1, 2025ಕ್ಕೆ ಅನ್ವಯವಾಗುವಂತೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅರ್ಹ ಮತದಾರರಿಂದ ಫಾರ್ಮ್-18 ಮತ್ತು ಫಾರ್ಮ್-19 ಅರ್ಜಿಗಳನ್ನು ಭರ್ತಿ ಮಾಡಿಸಿ ಸ್ವೀಕರಿಸುವಂತೆ ನಿರ್ದೇಶನ ನೀಡಲಾಗಿದೆ. ಚುನಾವಣೆಯು ಪಾರದರ್ಶಕವಾಗಿ, ನ್ಯಾಯಸಮ್ಮತವಾಗಿ ಹಾಗೂ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಿಲ್ಲದೆ ಶಾಂತಿಯುತವಾಗಿ ನಡೆಯಲು ದೋಷರಹಿತ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದು ಅತ್ಯವಶ್ಯಕವಾಗಿದೆ ಎಂದು ತಿಳಿಸಿದ್ದಾರೆ.

ಅರ್ಹ ಮತದಾರರನ್ನು ಗುರುತಿಸಿ ಮತದಾರರ ಪಟ್ಟಿಯಲ್ಲಿ ನೋಂದಾಯಿಸುವ ಮೂಲಕ ಅವರನ್ನು ಸಕ್ರಿಯ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಮಾಡುವುದು ಅಗತ್ಯವಾಗಿದೆ. ಮುಂಬರುವ ಚುನಾವಣೆಯಲ್ಲಿ ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಮೂಲಕ ಸುಭದ್ರ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು ಮತದಾರರ ನೋಂದಣಿ ಪ್ರಕ್ರಿಯೆ ಮಹತ್ವದ್ದಾಗಿದೆ ಎಂದು ಅವರು ಹೇಳಿದ್ದಾರೆ.

ಅರ್ಹ ಮತದಾರರ ಹೆಸರು ನೋಂದಾಯಿಸುವ ಪ್ರಕ್ರಿಯೆಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಫಾರ್ಮ್-18 ಮತ್ತು ಫಾರ್ಮ್-19 ಅರ್ಜಿಗಳು ಸ್ವೀಕೃತವಾಗದ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾಧಿಕಾರಿಗಳ ನಿರ್ದೇಶನದಂತೆ ಅರ್ಹ ಮತದಾರರು ಅಗತ್ಯ ಅರ್ಜಿಗಳನ್ನು ಭರ್ತಿ ಮಾಡಿ ಆಯಾ ತಹಸೀಲ್ದಾರ್ ಕಚೇರಿಯಲ್ಲಿ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿ ಸುರೇಖಾ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor