ಬೀದರ್ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬಿನ ಹೊಲಕ್ಕೆ ಬೆಂಕಿ : ಅಪಾರ ಹಾನಿ
ಭಾಲ್ಕಿ : ತಾಲೂಕಿನ ಭಾತಂಬ್ರಾ ಮತ್ತು ಜೋಳದಾಪಕಾ ಗ್ರಾಮದಲ್ಲಿ ಕಬ್ಬಿನ ಹೊಲ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿಗೆ ಆಹುತಿಯಾಗಿದ್ದು, ಅಪಾರ ಹಾನಿ ಸಂಭವಿಸಿದೆ.
ಭಾತಂಬ್ರಾ ಗ್ರಾಮದ ಮಹೇಶ್ ರಾಚೋಟೆ ಹಾಗೂ ಜೋಳದಾಪಕಾ ಗ್ರಾಮದ ರೈತ ಬಸವರಾಜ್ ಪಾಟೀಲ್ ಎಂಬವರಿಗೆ ಸೇರಿದ ಕಬ್ಬಿನ ಹೊಲ ಬೆಂಕಿಗೆ ಆಹುತಿಯಾಗಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ತೆರಳಿ ಬೆಂಕಿಯನ್ನು ನಂದಿಸಿದ್ದಾರೆ. ಘಟನೆಯಿಂದ ಲಕ್ಷಾಂತರ ರೂಪಾಯಿ ರೂ. ಬೆಳೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ.