×
Ad

ಬೀದರ್ | ತೊಗರಿಗೆ ಬೆಂಬಲ ಬೆಲೆ ನಿಗದಿ, ಖರೀದಿ ಪ್ರಕ್ರಿಯೆ ಆರಂಭಿಸಲು ಕ್ರಮ

Update: 2025-02-09 20:14 IST

ಸಾಂದರ್ಭಿಕ ಚಿತ್ರ

ಬೀದರ್ : 2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್ ಎ ಕ್ಯೂ ಗುಣಮಟ್ಟದ ತೊಗರಿ ಖರೀದಿಗೆ ಸಂಬಂಧಿಸಿದಂತೆ ಬೆಂಬಲ ಬೆಲೆ ನಿಗದಿಪಡಿಸಿದ್ದು, ತಕ್ಷಣದಿಂದಲೇ ಖರೀದಿ ಪ್ರಕ್ರಿಯೆ ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತೊಗರಿಯ ಪ್ರತಿ ಕ್ವಿಂಟಾಲ್ ಗೆ ಕೇಂದ್ರ ಸರ್ಕಾರದ ಬೆಂಬಲ ಬೆಲೆ 7,550 ರೂ. ಜೊತೆ ರಾಜ್ಯ ಸರ್ಕಾರದ ಪ್ರೋತಾಹಧನ 450 ರೂ. ಸೇರಿ ಒಟ್ಟು 8,000 ರೂ. ಗೆ ತೊಗರಿ ಖರೀದಿಸಲು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ್ ಪಾಟೀಲ್ ಅವರು ಜನವರಿ ತಿಂಗಳಲ್ಲಿ ಭರವಸೆ ನೀಡಿದ್ದರು. ಅದರಂತೆ ಮುಖ್ಯಮಂತ್ರಿಯು ಅನುಮೋದನೆ ನೀಡಿದ್ದಾರೆ. ಇಂದು ಆರ್ಥಿಕ ಇಲಾಖೆ ಸಹಮತಿ ನೀಡಲಾಗಿದೆ. ಈ ಕುರಿತು ಇದಕ್ಕೆ ಸಂಬಂಧಿಸಿದ ಇಲಾಖೆಗೆ ತಕ್ಷಣದಿಂದ ಅಷ್ಠಾನಗೊಳಿಸಲು ಸೂಕ್ತ ನಿರ್ದೇಶನ ನೀಡಲಾಗಿದೆ.

ರಾಜ್ಯದ ಪ್ರಮುಖ ತೊಗರಿ ಬೆಳೆಯುವ ಜಿಲ್ಲೆಗಳಾದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಕೊಪ್ಪಳ, ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಚಿತ್ರದುರ್ಗ, ಕೋಲಾರ ಹಾಗೂ ಚಿಕ್ಕಬಳ್ಳಾಪುರ್ ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಭಾಗದಲ್ಲಿ ಅಂದಾಜು 330 ಖರೀದಿ ಕೇಂದ್ರಗಳು ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ರೈತರು ತಮ್ಮ ಹತ್ತಿರವಿರುವ ಪಿಎಸಿಎಸ್, ಎಫ್ಪಿಒ, ಟಿಎಪಿಸಿಎಂಎಸ್ ಗಳಿಗೆ ಭೇಟಿ ನೀಡಿ ನೊಂದಣಿ ಮಾಡಿಕೊಂಡು, ಬೆಂಬಲ ಬೆಲೆ ಯೋಜನೆಯ ಹಾಗೂ ರಾಜ್ಯ ಸರ್ಕಾರದ ಪ್ರೋತ್ಸಾಹ ಧನದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೋರಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News