×
Ad

ಬೀದರ್ | ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ : ಶರಣು ಪಾಟೀಲ್

Update: 2025-09-05 18:23 IST

ಬೀದರ್ : ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರು ಮಹತ್ವದ ಪಾತ್ರ ವಹಿಸುತ್ತಾರೆ ಎಂದು ಶರಣು ಪಾಟೀಲ್ ಅವರು ಹೇಳಿದರು.

ಇಂದು ಸರಸ್ವತಿ ಶಿಕ್ಷಣ ವಿಕಾಸ ಸಮಿತಿ ಸಂಚಾಲಿತ ಮಡಿವಾಳೇಶ್ವರ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶಿಕ್ಷಕರೇ ಭಾರತದ ಭವ್ಯ ನಿರ್ಮಾಣದ ಶಿಲ್ಪಿಗಳು. ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ನೆಚ್ಚಿನ ವೃತ್ತಿ ಶಿಕ್ಷಕ ವೃತ್ತಿಯಾಗಿತ್ತು. ಅವರು ರಾಷ್ಟ್ರಪತಿ ಹಾಗೂ ಉಪರಾಷ್ಟ್ರಪತಿಯಾಗಿ ದೇಶದ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಶಿಕ್ಷಕ ವೃತ್ತಿಯೇ ಅತ್ಯುನ್ನತವಾದದ್ದು ಎಂದು ಅವರು ಪ್ರತಿಪಾದಿಸಿದ್ದರು ಎಂದರು.

ಚನ್ನಬಸವಂತ ರೆಡ್ಡಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಪ್ರೊ.ಎಸ್.ಬಿ. ಸಜ್ಜನಶೆಟ್ಟಿ, ಕಾರ್ಯದರ್ಶಿ ಹನುಮಂತರಾವ್ ಪಾಟೀಲ್, ಉಪಾಧ್ಯಕ್ಷ ನಾಗೇಶ್ ರೆಡ್ಡಿ, ಆಡಳಿತ ಮಂಡಳಿ ಸದಸ್ಯ ಶಿವಶರಣಪ್ಪ ಪಾಟೀಲ್, ಆಡಳಿತಾಧಿಕಾರಿ ಬಂಡೆಪ್ಪ ಎಕ್ಕಲಾರೆ, ಪ್ರಾಥಮಿಕ ಶಾಲೆಯ ಮುಖ್ಯಗುರು ಅರ್ಚನಾ ಶಿರಿಗೇರಿ, ವೈಷ್ಣವಿ, ಶ್ರದ್ಧಾ, ತ್ರಿಶಾ, ಅಂಕಿತ್ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News