ಬೀದರ್ | ಶೇಕ್ ಮೈನುದ್ದೀನ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಕಬ್ಬಡ್ಡಿಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
Update: 2025-09-19 20:15 IST
ಬೀದರ್: ಹುಲಸೂರ್ ತಾಲೂಕಿನ ಇಕ್ಬಾಲ್ ಪಟೇಲ್ ಶಿಕ್ಷಣ ಸಂಸ್ಥೆಯ ಶೇಕ್ ಮೈನುದ್ದೀನ್ ಪಿಯುಸಿ ಕಾಲೇಜಿನ ಮೂವರು ವಿದ್ಯಾರ್ಥಿಗಳು ಕಬ್ಬಡ್ಡಿಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ದೀಪಕ್ ದತ್ತಾತ್ರಿ, ನಯುಮ್ ಖಲೀಮ್ ಮತ್ತು ಯುವರಾಜ್ ದಾಮೋದರ್ ಎಂಬ ವಿದ್ಯಾರ್ಥಿಗಳು ರಾಜ್ಯ ಮಟ್ಟದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ.
2025-26ನೇ ಸಾಲಿನ ತಾಲೂಕು ಮಟ್ಟದ ಕಬ್ಬಡ್ಡಿ ಕ್ರೀಡಾಕೂಟದಲ್ಲಿ ಇವರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ತಲುಪಿತ್ತು. ಜಿಲ್ಲಾ ಮಟ್ಟದ ಕಬ್ಬಡ್ಡಿ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆದ ಇವರ ತಂಡದಿಂದ ಈ ಮೂವರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈ ಸಾಧನೆಗೆ ಕಾಲೇಜಿನ ಅಧ್ಯಾಪಕರು ಮತ್ತು ಸಿಬ್ಬಂದಿ ಹರ್ಷ ವ್ಯಕ್ತಪಡಿಸಿ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.