×
Ad

ಬೀದರ್ | ಶಿಕ್ಷಣ ಸಂಸ್ಥೆಗಳ ಆವರಣದಿಂದ 100 ಮೀ. ಒಳಗೆ ತಂಬಾಕು ಮಾರಾಟ ನಿಷೇಧ: ಎಡಿಸಿ ಶಿವಾನಂದ್ ಕರಾಳೆ

Update: 2025-09-16 19:50 IST

ಬೀದರ್: ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳ ಆವರಣದಿಂದ 100 ಮೀಟರ್ ಅಂತರದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧಿಸಲಾಗಿದೆ. ಈ ನಿಯಮವನ್ನು ಉಲ್ಲಂಘಿಸಿದಲ್ಲಿ ತಕ್ಷಣವೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ್ ಕರಾಳೆ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಶಾಲಾ-ಕಾಲೇಜುಗಳಲ್ಲಿ ತಂಬಾಕು ಸೇವನೆಯ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಹೇಳಿದರು.

ಮುಖ್ಯ ಸೂಚನೆಗಳು:

ಎಲ್ಲಾ ಶಿಕ್ಷಣ ಸಂಸ್ಥೆಗಳು ಕಡ್ಡಾಯವಾಗಿ Tobacco Free Educational Institutions ಆಪ್‌ನಲ್ಲಿ ನೋಂದಣಿ ಮಾಡಿಕೊಳ್ಳಬೇಕು.

ಬಸ್ ನಿಲ್ದಾಣ, ರೈಲು ನಿಲ್ದಾಣ, ಸರ್ಕಾರಿ-ಸರ್ಕಾರೇತರ ಕಚೇರಿಗಳಲ್ಲಿ ತಂಬಾಕು ಸೇವನೆ ನಿಷೇಧಿಸಲಾಗಿದ್ದು, ಉಲ್ಲಂಘನೆ ಮಾಡಿದರೆ 1,000 ರೂ. ದಂಡ ವಿಧಿಸಲಾಗುವುದು.

ಹುಕ್ಕಾಬಾರ್‌ ತೆರೆಯುವುದಕ್ಕೆ ನಿಷೇಧ. ಕಂಡುಬಂದಲ್ಲಿ 1 ಲಕ್ಷ ರೂ. ದಂಡ ವಿಧಿಸಲಾಗುವುದು.

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ತಂಬಾಕು ಮಾರಾಟ ಮಾಡುವುದು ಸಂಪೂರ್ಣ ನಿಷೇಧ.

ತಂಬಾಕು ಉತ್ಪನ್ನಗಳ ಮಾರಾಟಗಾರರು ಕಡ್ಡಾಯವಾಗಿ ಲೈಸೆನ್ಸ್ ಹೊಂದಿರಬೇಕು.

ತಾಲ್ಲೂಕು ಮತ್ತು ಗ್ರಾಮ ಮಟ್ಟದಲ್ಲಿ ತಿಂಗಳಿಗೊಮ್ಮೆ ಸಭೆ ನಡೆಸಿ ತಂಬಾಕು ಸೇವನೆಯ ದುಷ್ಪರಿಣಾಮಗಳ ಬಗ್ಗೆ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಿ, ತಂಬಾಕು ಮುಕ್ತ ಗ್ರಾಮಗಳನ್ನು ರೂಪಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಈ ವೇಳೆ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಪೂಜಾರಿ, ಆರೋಗ್ಯ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News