×
Ad

ಬೀದರ್ | ಟ್ರಾಕ್ಟರ್-ಬೈಕ್ ಮುಖಾಮುಖಿ ಢಿಕ್ಕಿ: ಬೈಕ್ ಸವಾರ ಮೃತ್ಯು

Update: 2024-11-12 09:42 IST

ಬೀದರ್: ಟ್ರಾಕ್ಟರ್ ಮತ್ತು ಬೈಕ್ ಮಧ್ಯೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಮ್ನಾಬಾದ್ ತಾಲೂಕಿನ ಘಾಟಬೋರಾಳ ಹೊರವಲಯದಲ್ಲಿ ಸೋಮವಾರ ಮುಸ್ಸಂಜೆ ವೇಳೆ ನಡೆದಿದೆ.

ಘಾಟಬೋರಳ ಗ್ರಾಮದ ನಿವಾಸಿ ಶತ್ರುಘ್ನ ಮಾರುತಿ ರಾವು ಹುಣಸನಾಳೆ (27) ಮೃತಪಟ್ಟವರು ಎಂದು ತಿಳಿದುಬಂದಿದೆ.

ಶತ್ರುಘ್ನ ಸೋಮವಾರ ಸಂಜೆ ಗ್ರಾಮದಿಂದ ಹೊಲಕ್ಕೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಟ್ರಾಕ್ಟರ್ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಸಂಚಾರ ಪೊಲೀಸ್ ಠಾಣೆಯ ಪಿಎಸ್ಸೈ ಬಸವಲಿಂಗಪ್ಪ ಕೊಡಿಹಾಳಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪಟ್ಟಣದ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News