ಬೀದರ್ | ಬೈಕ್ ನಲ್ಲಿ 20 ಲಕ್ಷ ರೂ.ಮೌಲ್ಯದ ಗಾಂಜಾ ಸಾಗಾಟ : ಇಬ್ಬರು ಆರೋಪಿಗಳ ಬಂಧನ
Update: 2025-10-13 18:36 IST
ಬೀದರ್ : ಬೈಕ್ ಮೇಲೆ ಸಾಗಿಸುತ್ತಿದ್ದ 20 ಲಕ್ಷ ರೂ. ಮೌಲ್ಯದ 20 ಕೆ.ಜಿ ಗಾಂಜಾ ವಶಕ್ಕೆ ಪಡೆದು ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಚಿಟಗುಪ್ಪಾ ತಾಲೂಕಿನ ಮನ್ನಾಏಖೇಳ್ಳಿ-ಮೀನಕೇರಾ ಕ್ರಾಸ್ ಬಳಿ ನಡೆದಿದೆ.
ಇಬ್ಬರು ವ್ಯಕ್ತಿಗಳು ಅಕ್ರಮವಾಗಿ ಗಾಂಜಾ ಸಾಗಿಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಅಧರಿಸಿ ಎಸ್ಪಿ ಪ್ರದೀಪ್ ಗುಂಟಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಚಂದ್ರಕಾಂತ್ ಪೂಜಾರಿ ಅವರ ಮಾರ್ಗದರ್ಶನದಂತೆ ಮನ್ನಾಏಖೇಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಮಹೇಂದ್ರಕುಮಾರ್ ಅವರ ನೇತೃತ್ವದ ತಂಡ ದಾಳಿ ನಡೆಸಿದೆ.
ಆರೋಪಿಗಳಿಂದ ಗಾಂಜಾ ಜೊತೆಗೆ 15 ಸಾವಿರ ರೂ. ಮೌಲ್ಯದ ಒಂದು ದ್ವಿಚಕ್ರ ವಾಹನ ಮತ್ತು 4 ಸಾವಿರ ರೂ.ಮೌಲ್ಯದ ಒಂದು ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಈ ಘಟನೆಗೆ ಸಂಬಂಧಿಸಿ ಮನ್ನಾಏಖೇಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.