×
Ad

ಬೀದರ್ | ಎರಡು ಬೈಕ್‌ಗಳು ಮುಖಾಮುಖಿ ಢಿಕ್ಕಿ; ಓರ್ವ ಮೃತ್ಯು

Update: 2025-01-20 20:47 IST

ಸಿದ್ರಾಮ್ ಎಲಶೆಟ್ಟಿ

ಬೀದರ್ : ಎರಡು ಬೈಕ್ ನಡುವೆ ಅಪಘಾತ ಸಂಭವಿಸಿ ಒರ್ವ ಯುವಕ ಮೃತಪಟ್ಟ ಘಟನೆ ಭಾಲ್ಕಿ ತಾಲ್ಲೂಕಿನ ತರನಳ್ಳಿ ಗ್ರಾಮದ ಹತ್ತಿರ ನಡೆದಿದೆ.

ತರನಳ್ಳಿ ಗ್ರಾಮದ ನಿವಾಸಿಯಾದ ಸಿದ್ರಾಮ್ ಎಲಶೆಟ್ಟಿ (48) ಮೃತಪಟ್ಟ ವ್ಯಕ್ತಿ ಎಂದು ತಿಳಿದುಬಂದಿದೆ.

ಇಂದು ಮಧ್ಯಾಹ್ನ ಸುಮಾರು 3 ಗಂಟೆಗೆ ಸಿದ್ರಾಮ್ ಬೈಕ್ ಮೇಲೆ ತನ್ನ ಹೊಲದಿಂದ ಮನೆಗೆ ಹೋಗುತ್ತಿದ್ದರು. ಮಾರ್ಗ ಮಧ್ಯದಲ್ಲಿ ಎದುರಿನಿಂದ ಬಂದ ಬೈಕ್ ಸಿದ್ರಾಮ್ ಅವರ ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಘಟನೆಗೆ ಸಂಬಂಧಿಸಿದಂತೆ ಧನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News