ಬೀದರ್ | ಈಜಲು ಹೋದ ಬಾಲಕರಿಬ್ಬರ ಮೃತ್ಯು
ಬೀದರ್ : ದನಗಳನ್ನು ಮೇಯಿಸಲು ಹೊಲಕ್ಕೆ ಹೋದ ಇಬ್ಬರು ಬಾಲಕರು ಹೊಂಡದ ನೀರಿನಲ್ಲಿ ಈಜಾಡಲು ಹೋಗಿ ಮೃತಪಟ್ಟ ಘಟನೆ ಬಸವಕಲ್ಯಾಣ ತಾಲೂಕಿನ ರಾಂಪೂರವಾಡಿ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.
ಮೃತಬಾಲಕರನ್ನು ರಾಂಪೂರವಾಡಿ ಗ್ರಾಮದ ನಿವಾಸಿಗಳಾದ ಮೈಲಾರಿ ದೊಡ್ಮನಿ (10) ಹಾಗೂ ಶರಣಪ್ಪ ಹಾಳಗೋರ್ಟೆ (10)ಎಂದು ಗುರುತಿಸಲಾಗಿದೆ.
ರವಿವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಗ್ರಾಮದ ವ್ಯಾಪ್ತಿಯ ಜಮೀನಿನಲ್ಲಿ ದನಗಳನ್ನು ಮೇಯಿಸಲು ಹೋದ ಬಾಲಕರು ಹೊಲದಲ್ಲಿರುವ ಹೊಂಡದಲ್ಲಿ ಈಜಾಡಲು ಹೋಗಿ, ಹೊಂಡದ ನೀರಿನಲ್ಲಿ ಸಿಲುಕಿ ಮೇಲೆ ಬರಲಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಟನೆ ಬಗ್ಗೆ ಮಾಹಿತಿ ತಿಳಿದ ಕ್ಷೇತ್ರದ ಶಾಸಕ ಡಾ.ಸಿದ್ದಲಿಂಗ ಪಾಟೀಲ್ ಅವರು ರಾಜೇಶ್ವರ್ ಪಟ್ಟಣದ ಸರಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಮೃತ ಬಾಲಕರ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದರು. ಮೃತರ ಕುಟುಂಬಕ್ಕೆ ಸರಕಾರದಿಂದ ಸಿಗುವ ಎಲ್ಲ ರೀತಿಯ ಸಹಾಯ, ಸೌಲಭ್ಯಗಳನ್ನು ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ಅವರು ಭರವಸೆ ನೀಡಿದರು.
ಈ ಘಟನೆ ಕುರಿತು ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮುಂದಿನ ಕ್ರಮವಹಿಸಿದ್ದಾರೆ.