Bidar | ಅಂಗನವಾಡಿಗಳ ಬೀಗ ಮುರಿದು ಎರಡು ಗ್ಯಾಸ್ ಸಿಲಿಂಡರ್ ಕಳ್ಳತನ
Update: 2026-07-01 21:33 IST
ಬೀದರ್ : ಭಾಲ್ಕಿ ತಾಲೂಕಿನ ರಾಚಪ್ಪ ಗೌಡಗಾಂವ್ ಗ್ರಾಮದಲ್ಲಿರುವ ಎರಡು ಅಂಗನವಾಡಿಗಳ ಬೀಗ ಮುರಿದು ಎರಡು ತುಂಬಿದ ಗ್ಯಾಸ್ ಸಿಲಿಂಡರ್‌ಗಳನ್ನು ಕಳ್ಳತನ ಮಾಡಿರುವ ಘಟನೆ ಮಂಗಳವಾರ ಮಧ್ಯರಾತ್ರಿ ನಡೆದಿದೆ.
ಮಂಗಳವಾರ ಸಂಜೆ ಎಂದಿನಂತೆ ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳಿಗೆ ಆಹಾರ ವಿತರಿಸಿದ ಬಳಿಕ ಅಂಗನವಾಡಿ ಕೇಂದ್ರಗಳಿಗೆ ಬೀಗ ಹಾಕಿ ತೆರಳಿದ್ದರು. ರಾತ್ರಿ ವೇಳೆ ಕಳ್ಳರು ಎರಡು ಅಂಗನವಾಡಿಗಳ ಬೀಗ ಮುರಿದು ಒಳನುಗ್ಗಿ ಅಲ್ಲಿದ್ದ ಎರಡು ಗ್ಯಾಸ್ ಸಿಲಿಂಡರ್‌ಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಬುಧವಾರ ಬೆಳಿಗ್ಗೆ ಅಂಗನವಾಡಿ ಕಾರ್ಯಕರ್ತೆಯರು ಕೇಂದ್ರಕ್ಕೆ ಆಗಮಿಸಿದಾಗ ಬೀಗ ಮುರಿದಿರುವುದು ಹಾಗೂ ಗ್ಯಾಸ್ ಸಿಲಿಂಡರ್‌ಗಳು ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ತಿಳಿದ ಮೆಹಕರ್ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.