×
Ad

ಬೀದರ್ | ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

Update: 2025-08-08 17:19 IST

ಬೀದರ್ : ಸಾಲಬಾಧೆ ತಾಳಲಾರದೆ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾಲ್ಕಿ ತಾಲೂಕಿನ ರುದನೂರ ಗ್ರಾಮದಲ್ಲಿ ನಡೆದಿದೆ.

ಚಂದ್ರಕಾಂತ್ ಶೇರಿಕಾರ್ (58) ಆತ್ಮಹತ್ಯೆ ಮಾಡಿಕೊಂಡ ರೈತ. ಚಂದ್ರಕಾಂತ್ ಶೇರಿಕಾರ್  ವಿವಿಧ ಬ್ಯಾಂಕ್‌ಗಳಿಂದ ಸುಮಾರು 6 ಲಕ್ಷ ರೂ. ಸಾಲ ಮಾಡಿದ್ದರು. ಆದರೆ, ಸಾಲ ಮರು ಪಾವತಿಸಲಾಗದೆ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿ ವಿಷ ಸೇವಿಸಿದ್ದರು ಎನ್ನಲಾಗಿದೆ.

ಚಂದ್ರಕಾಂತ್ ಶೇರಿಕಾರ್ ಅವರಿಗೆ ಸುಮಾರು 2 ಎಕರೆ 15 ಗುಂಟೆ ಸಾಧಾರಣ ಜಮೀನು ಇತ್ತು. ಹೊಲದಲ್ಲಿ ಬೋರ್‌ವೆಲ್ ಕೊರೆಯಲು ಸಾಲ ಮಾಡಿದ್ದರು. ಆದರೆ, ಬೋರ್‌ವೆಲ್ ನೀರು ಬೆಳೆಗಳಿಗೆ ಸಾಲುತ್ತಿರಲಿಲ್ಲ. ಇದರಿಂದ ಸಮಸ್ಯೆಯಾಗಿತ್ತು ಎಂದು ಮೃತ ರೈತನ ಪತ್ನಿ ದೂರಿನಲ್ಲಿ ತಿಳಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಧನ್ನೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News