ಬೀದರ್ | ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ
ಬೀದರ್ : ಸಾಲಬಾಧೆ ತಾಳಲಾರದೆ ರೈತನೊರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಟಗುಪ್ಪ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಉಡಬಾಳ್ ಗ್ರಾಮದಲ್ಲಿ ಶುಕ್ರವಾರ ಜರುಗಿದೆ.
ಮೃತರನ್ನು ಮಲ್ಲಿಕಾರ್ಜುನ್ (38) ಎಂದು ಗುರುತಿಸಲಾಗಿದೆ.
ಮಲ್ಲಿಕಾರ್ಜುನ್ ಅವರ ಕುಟುಂಬ ಮತ್ತು ಆತನ ಚಿಕ್ಕಪ್ಪನ ಕುಟುಂಬ ಕೂಡು ಕುಟುಂಬವಾಗಿತ್ತು. ಅವರ ಚಿಕ್ಕಪ್ಪನ ಹೆಸರಲ್ಲಿ 3 ಎಕರೆಗಿಂತಲೂ ಹೆಚ್ಚು ಜಮೀನು ಇತ್ತು. ಆ ಜಮೀನಿನ ಮೇಲೆ 1 ಲಕ್ಷ 50 ಸಾವಿರ ರೂ. ಸಾಲವಾಗಿತ್ತು. ಈ ವರ್ಷ ಹೆಚ್ಚಾಗಿ ಮಳೆ ಆಗಿದ್ದರಿಂದ ಹೊಲದಲ್ಲಿನ ಬೆಳೆ ಸಂಪೂರ್ಣವಾಗಿ ನಾಶವಾಗಿ ಹಾಳಾಗಿತ್ತು. ಸಾಲ ಕಟ್ಟುವುದು ಹೇಗೆ ಎಂದು ಚಿಂತೆಯಲ್ಲಿ ಮುಳುಗಿದ ಮಲ್ಲಿಕಾರ್ಜುನ್ ಅವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಘಟನೆಗೆ ಸಂಬಂಧಿಸಿದಂತೆ ಆತನ ಕುಟುಂಬಸ್ಥರು ಚಿಟಗುಪ್ಪ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.