×
Ad

ಬೀದರ್ | ಸಾಲಬಾಧೆ ತಾಳಲಾರದೆ ಬಾವಿಗೆ ಹಾರಿ ರೈತ ಆತ್ಮಹತ್ಯೆ

Update: 2025-10-14 21:11 IST

ಬೀದರ್ : ಸಾಲಬಾಧೆ ತಾಳಲಾರದೆ ಬಾವಿಗೆ ಹಾರಿ ರೈತನೊರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾಲ್ಕಿ ತಾಲೂಕಿನ ಹಾಲಹಿಪ್ಪರಗಾ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಹಾಲಹಿಪ್ಪರಗಾ ಗ್ರಾಮದ ನಿವಾಸಿ ಶಂಕರ್ (72) ಎಂದು ಗುರುತಿಸಲಾಗಿದೆ.

ಆತ್ಮಹತ್ಯೆ ಮಾಡಿಕೊಂಡ ಶಂಕರ್ ಅವರಿಗೆ 2 ಎಕರೆ 24 ಗುಂಟೆ ಹೊಲ ಇದ್ದು, ಡಿಸಿಸಿ ಬ್ಯಾಂಕ್ ನಲ್ಲಿ 50 ಸಾವಿರ ರೂ. ಹಾಗೂ ಖಾಸಗಿಯಾಗಿ 5 ಲಕ್ಷ ರೂ. ಸಾಲ ಮಾಡಿದ್ದರು. ಇದರಿಂದಾಗಿ ಚಿಂತಿತನಾದ ಅವರು ಅ.6 ರಂದು ಮನೆಯಿಂದ ಹೊಲಕ್ಕೆ ಹೋಗಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಅ.13 ರಂದು ಅವರ ದೇಹ ಬಾವಿಯಿಂದ ತೇಲಾಡುತ್ತಿರುವುದು ಕಂಡು ಬಂದಿದೆ ಎನ್ನಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಧನ್ನೂರು ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News