ಬೀದರ್ | ಸಾಲಬಾಧೆ ತಾಳಲಾರದೆ ಬಾವಿಗೆ ಹಾರಿ ರೈತ ಆತ್ಮಹತ್ಯೆ
Update: 2025-01-28 22:18 IST
ಜಗದೀಶರೆಡ್ಡಿ
ಬೀದರ್ : ಸಾಲಬಾಧೆ ತಾಳಲಾರದೆ ರೈತನೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಸವಕಲ್ಯಾಣ ತಾಲ್ಲೂಕಿನ ಇಲ್ಲಾಳ ಗ್ರಾಮದಲ್ಲಿ ನಡೆದಿದೆ.
ಇಲ್ಲಾಳ ಗ್ರಾಮದ ನಿವಾಸಿ ಜಗದೀಶರೆಡ್ಡಿ (49) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ತಿಳಿದುಬಂದಿದೆ.
ಮೃತ ರೈತನಿಗೆ ಸುಮಾರು ಒಟ್ಟು 5 ಲಕ್ಷ ರೂ. ಗಳಷ್ಟು ಸಾಲವಿದ್ದು, ಸಾಲ ಬಾಧೆಯಿಂದ ನೊಂದು ಇಂದು ನಸುಕಿನ ಜಾವ ಸುಮಾರು 5 ಗಂಟೆಗೆ ತನ್ನ ಜಮೀನಿಗೆ ತೆರಳಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಈ ಕುರಿತು ಮಂಠಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.