×
Ad

Bidar | ಚಿಕಿತ್ಸೆ ಫಲಿಸದೆ ಅಪರಿಚಿತ ವ್ಯಕ್ತಿ ಮೃತ್ಯು : ವಾರಸುದಾರರ ಪತ್ತೆಗೆ ಮನವಿ

Update: 2026-07-02 18:35 IST

ಸಾಂದರ್ಭಿಕ ಚಿತ್ರ

ಬೀದರ್: ನಗರದ ಲಾವಣ್ಯ ಕನ್ವೆನ್ಷನ್ ಹಾಲ್ ಸಮೀಪ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಮೃತನ ವಾರಸುದಾರರ ಬಗ್ಗೆ ಮಾಹಿತಿ ಇದ್ದಲ್ಲಿ ತಿಳಿಸುವಂತೆ ನ್ಯೂಟೌನ್ ಪೊಲೀಸ್ ಠಾಣೆ ಪೊಲೀಸರು ಮನವಿ ಮಾಡಿದ್ದಾರೆ.

ಸುಮಾರು 35 ವರ್ಷದ ವ್ಯಕ್ತಿಯೊಬ್ಬರು ಕುಡಿದ ಮತ್ತಿನಲ್ಲಿ ರಸ್ತೆಯಲ್ಲಿ ಬಿದ್ದಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಅವರು ಮಾತನಾಡುವ ಸ್ಥಿತಿಯಲ್ಲಿರದ ಹಿನ್ನೆಲೆಯಲ್ಲಿ ಅವರನ್ನು ಬ್ರೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಜೂನ್ 28ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತದೇಹವನ್ನು ಬ್ರೀಮ್ಸ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಮೃತ ವ್ಯಕ್ತಿಯು ಸುಮಾರು 5 ಅಡಿ 5 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಬಿಳಿ ಬಣ್ಣದ ಪೂರ್ಣತೋಳಿನ ಶರ್ಟ್ ಹಾಗೂ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತನ ವಾರಸುದಾರರು ಅಥವಾ ಗುರುತು ಕುರಿತು ಮಾಹಿತಿ ಇರುವವರು ನ್ಯೂಟೌನ್ ಪೊಲೀಸ್ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್ (ಮೊ. 94808 03446) ಅಥವಾ ಬೀದರ್ ಪೊಲೀಸ್ ನಿಯಂತ್ರಣ ಕೊಠಡಿ (08482-226704)ಗೆ ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.

ಈ ಕುರಿತು ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತನ ಗುರುತು ಹಾಗೂ ಸಾವಿನ ಕಾರಣ ಪತ್ತೆಗಾಗಿ ತನಿಖೆ ಮುಂದುವರಿದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News