ಬೀದರ್ | ಆಸ್ಪತ್ರೆಗೆ ದಾಖಲಾಗಿದ್ದ ಅಪರಿಚಿತ ವ್ಯಕ್ತಿ ಮೃತ್ಯು : ವಾರಸುದಾರರ ಪತ್ತೆಗಾಗಿ ಮನವಿ
ಸಾಂದರ್ಭಿಕ ಚಿತ್ರ
ಬೀದರ್ : ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅಪರಿಚಿತ ವ್ಯಕ್ತಿಯೊರ್ವರು ಮೃತಪಟ್ಟಿದ್ದು, ಇವರ ವಾರಸುದಾರರು ಯಾರೆಂದು ಪತ್ತೆಯಾಗಿರುವುದಿಲ್ಲ. ಮೃತ ವ್ಯಕ್ತಿಯ ವಾರಸುದಾರರು ಯಾರಾದರೂ ಪತ್ತೆಯಾದಲ್ಲಿ ಮಾಹಿತಿ ನೀಡಬೇಕು ಎಂದು ಬೀದರ್‌ನ ನೂತನ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೃತರನ್ನು ಫಾರೂಕ್ (37) ಎಂದು ಗುರುತಿಸಲಾಗಿದ್ದು, ಇತನು ಜೂ.2 ರಂದು ಮೃತಪಟ್ಟಿದ್ದು, ಈವರೆಗೆ ವಾರಸುದಾರರು ಯಾರೆಂದು ಪತ್ತೆಯಾಗಿರುವುದಿಲ್ಲ. ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯಾಧಿಕಾರಿಗಳ ಲಿಖಿತ ದೂರಿನ ಅನ್ವಯ ಯುಡಿಆರ್ ಪ್ರಕರಣ ದಾಖಲಿಸಿ, ತನಿಖೆ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಅಪರಿಚಿತ ಮೃತ ವ್ಯಕ್ತಿಯು 5.5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಆತನು ಒಂದು ತಿಳಿ ಗುಲಾಬಿ ಬಣ್ಣದ ಉದ್ದನೇ ತೋಳಿನ ಅಂಗಿ ಮತ್ತು ಒಂದು ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದಾನೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಈ ಚಹರೆಯುಳ್ಳ ಅಪರಿಚಿತ ವ್ಯಕ್ತಿಯ ವಾರಸುದಾರರು ಯಾರಾದರೂ ಪತ್ತೆಯಾದಲ್ಲಿ ಬೀದರ್ ನೂತನ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಅವರ ಮೊಬೈಲ್ ಸಂಖ್ಯೆ: 94808 03446, ಬೀದರ್ ಕಂಟ್ರೋಲ್ ರೂಮ್ ದೂರವಾಣಿ ಸಂಖ್ಯೆ: 08482-226704 ಗೆ ಸಂಪರ್ಕಿಸುವಂತೆ ಅವರು ಕೋರಿದ್ದಾರೆ.