×
Ad

ಬೀದರ್ | ಅಪರಿಚಿತ ವಾಹನ ಢಿಕ್ಕಿ: ಪಾದಚಾರಿ ಮೃತ್ಯು

Update: 2025-01-29 16:56 IST

ಸಾಂದರ್ಭಿಕ ಚಿತ್ರ

ಬೀದರ್ : ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬ ಮೃತಪಟ್ಟ ಘಟನೆ ಹುಮನಾಬಾದ್ ತಾಲ್ಲೂಕಿನ ಧೂಮ್ಮನಸುರ್ ಗ್ರಾಮದ ಹತ್ತಿರ ನಡೆದಿದೆ.

ದುಬಲಗುಂಡಿ ಗ್ರಾಮದ ನಿವಾಸಿಯಾದ ಅನಿಲ್ ಚಿಂಚೋಳಿಕರ್ (38) ಮೃತ ವ್ಯಕ್ತಿ ಎಂದು ತಿಳಿದುಬಂದಿದೆ.

ಪತಿ ಗಂಡ ಪ್ಲಂಬರ್ ಕೆಲಸ ಮಾಡಲು ಹುಮನಾಬಾದಗೆ ಹೋಗಿದ್ದರು. ಹುಮನಾಬಾದ್ ನಿಂದ ಬೀದರ್ ಹೋಗುವ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ವೇಗವಾಗಿ ಬಂದ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ನನ್ನ ಪತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಘಟನೆ ನಡೆದ ಬಗ್ಗೆ ದಾರಿ ಹೋಕರು ನನಗೆ ಕರೆ ಮಾಡಿ ತಿಳಿಸಿದ್ದಾರೆ. ನಾವು ತಕ್ಷಣವೇ ಸ್ಥಳಕ್ಕೆ ಧಾವಿಸಿ ನೋಡಿದಾಗ ನನ್ನ ಗಂಡ ಮೃತಪಟ್ಟಿದ್ದರು. ನಂತರ ಮೃತದೇಹ ಪರೀಕ್ಷೆಗಾಗಿ ಹುಮನಾಬಾದ್ ಸರಕಾರಿ ಆಸ್ಪತ್ರೆಗೆ ಮೃತದೇಹ ಸಾಗಿಸಿದ್ದೆವು ಎಂದು ಮೃತ ವ್ಯಕ್ತಿಯ ಪತ್ನಿ ಅನುಸೂಯ ದೂರು ನೀಡಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಹುಮನಾಬಾದ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News