×
Ad

Bidar | ಕುಡಿಯುವ ನೀರಿಗಾಗಿ ರಸ್ತೆ ತಡೆದು ಗ್ರಾಮಸ್ಥರ ಪ್ರತಿಭಟನೆ

ಮೊರಂಬಿ ಗ್ರಾಮದಲ್ಲಿ ನೀರಿನ ಸಮಸ್ಯೆ; ತಾತ್ಕಾಲಿಕ ವ್ಯವಸ್ಥೆಗೆ ಅಧಿಕಾರಿಗಳ ಭರವಸೆ

Update: 2026-06-29 19:37 IST

ಬೀದರ್: ಮೊರಂಬಿ ಗ್ರಾಮದಲ್ಲಿ ಹಲವಾರು ದಿನಗಳಿಂದ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಸೋಮವಾರ ಭಾಲ್ಕಿ-ಬಸವಕಲ್ಯಾಣ ಮುಖ್ಯ ರಸ್ತೆಯನ್ನು ತಡೆದು ಪ್ರತಿಭಟನೆ ನಡೆಸಿದರು.

ಗ್ರಾಮದ ಮಹಿಳೆಯರು ಖಾಲಿ ಕೊಡಗಳನ್ನು ಹಿಡಿದು ರಸ್ತೆ ತಡೆ ನಡೆಸಿದ ಪರಿಣಾಮ ಕೆಲಕಾಲ ಸರ್ಕಾರಿ ಬಸ್‌ಗಳು ಸೇರಿದಂತೆ ಖಾಸಗಿ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು. ಬಳಿಕ ಪ್ರತಿಭಟನಾಕಾರರು ಮೊರಂಬಿ ಗ್ರಾಮ ಪಂಚಾಯಿತಿ ಕಚೇರಿಗೆ ತೆರಳಿ ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮದಲ್ಲಿ ಕಳೆದ ಹಲವು ದಿನಗಳಿಂದ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ಸಮರ್ಪಕವಾಗಿ ನೀರು ಸರಬರಾಜು ಮಾಡುತ್ತಿಲ್ಲ. ಈ ಕುರಿತು ಅನೇಕ ಬಾರಿ ಮನವಿ ಸಲ್ಲಿಸಿದ್ದರೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸಮಸ್ಯೆ ಪರಿಹರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮಹಿಳೆಯರು ಆರೋಪಿಸಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡರು. ಸದ್ಯಕ್ಕೆ ತಾತ್ಕಾಲಿಕವಾಗಿ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು. ಎರಡು-ಮೂರು ದಿನಗಳಲ್ಲಿ ಹೊಸ ಮೋಟಾರ್ ಅಳವಡಿಸಿ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದರು.

ಅಧಿಕಾರಿಗಳ ಭರವಸೆಯ ನಂತರ ಗ್ರಾಮಸ್ಥರು ಪ್ರತಿಭಟನೆಯನ್ನು ಹಿಂತೆಗೆದುಕೊಂಡರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News