×
Ad

ಬೀದರ್ | ವಕ್ಫ್ ಆಸ್ತಿ ಕಬಳಿಕೆ ಆರೋಪ : ಕ್ರಮಕ್ಕಾಗಿ ಜಿಲ್ಲಾಧಿಕಾರಿಗೆ ಮನವಿ

Update: 2025-08-22 00:01 IST

ಬೀದರ್ : ಬಸವಕಲ್ಯಾಣದ ಆಟೋ ನಗರ ಕಾಲೋನಿಯಲ್ಲಿನ ಸರಕಾರಿ ಉದ್ಯಾನವನದ ಜಾಗ ಹಾಗೂ ನಗರದ ರಾಜೆಬಕ್ಸರ್ ದರ್ಗಾದ ವಕ್ಫ್ ಆಸ್ತಿಯನ್ನು ಪ್ರಭಾವಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದು, ಒತ್ತುವರಿ ಮಾಡಿಕೊಂಡವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಕಾರ್ಯಕರ್ತ ನವಾಝ್‌ ಅವರು ಮನವಿ ಮಾಡಿದ್ದಾರೆ.

ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜೆಬಕ್ಸರ್ ದರ್ಗಾಕ್ಕೆ 420 ಎಕರೆ ಭೂಮಿ ಇತ್ತು. ಆದರೆ ಆ ಭೂಮಿಯನ್ನು ಪ್ರಭಾವಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದು, ಈಗ ಕೇವಲ 30 ಎಕರೆ ಭೂಮಿ ಅಷ್ಟೇ ಅಲ್ಲಿ ಉಳಿದಿದೆ ಎಂದು ಆರೋಪಿಸಿದ್ದಾರೆ.

ಬಸವಕಲ್ಯಾಣ ನಗರದಲ್ಲಿ ಸರಕಾರಿ ಭೂಮಿ ಒತ್ತುವರಿ ಮಾಡಿಕೊಳ್ಳಲಾಗಿದೆ. ಸರಕಾರಿ ಜಾಗದಲ್ಲಿ ಖಾಸಗಿ ವ್ಯಕ್ತಿಗಳು ಬಂಗಲೆ, ಗ್ಯಾರೇಜ್ ಹಾಗೂ ಇನ್ನಿತರ ಅಂಗಡಿಗಳು ಹಾಕಿಕೊಂಡು ಒತ್ತುವರಿ ಮಾಡಿಕೊಂಡಿದ್ದಾರೆ. ಒತ್ತುವರಿ ಭೂಮಿ ತೆರವು ಮಾಡಲು ನಗರಸಭೆ ಅಧಿಕಾರಿಗಳು ಮುಂದಾಗುತ್ತಿಲ್ಲ ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News