×
Ad

ಬೀದರ್ | ಸಂವಿಧಾನದಿಂದ ಭಾರತ ದೇಶ ಜಗತ್ತಿನಲ್ಲಿ ಸದೃಢವಾಗಿ ಆಡಳಿತ ನಡೆಸುತ್ತಿದೆ : ಪ್ರೊ.ಬಿ.ಎಸ್.ಬಿರಾದಾರ

Update: 2025-01-26 20:58 IST

ಬೀದರ್ : ಭವ್ಯ ಭಾರತ ಪ್ರಜಾಪ್ರಭುತ್ವ ರಾಷ್ಟ್ರಕ್ಕೆ ಸಂವಿಧಾನವೇ ಜೀವಾಳ ಹಾಗೂ ಆಧಾರ ಸ್ತಂಭವಾಗಿದೆ. ಹೀಗಾಗಿ ಭಾರತದಂತಹ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಜಗತ್ತಿನಲ್ಲಿ ಸದೃಢವಾಗಿ ಆಡಳಿತ ನಡೆಸುತ್ತಿದೆ ಎಂದು ಬೀದರ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಎಸ್.ಬಿರಾದಾರ್ ಅವರು ತಿಳಿಸಿದರು.

ಇಂದು ಬೀದರ್ ವಿಶ್ವವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ 76ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತಾನಾಡಿದ ಅವರು, ಸರ್ವರೂ ಸಂವಿಧಾನದ ಆಶಯಗಳನ್ನು ಗೌರವಿಸಬೇಕಾದ ಅಗತ್ಯವಿದೆ. ಯುವಕ ಯುವತಿಯರು ತಮ್ಮ ಹಕ್ಕುಗಳೊಂದಿಗೆ ತಮ್ಮ ಕರ್ತವ್ಯವನ್ನೂ ಕೂಡ ಮರೆಯಬಾರದು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಭವಿಷ್ಯ ನಿರ್ಮಿಸಿಕೊಳ್ಳಬೇಕು. ದೇಶದ ಭವಿಷ್ಯ ಯುವಕರ ಕೈಯಲ್ಲಿದೆ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಆಡಳಿತ ವಿಭಾಗದ ಕುಲಸಚಿವೆ ಸುರೇಖಾ ಕೆ.ಎ.ಎಸ್ ಅವರು ಮಾತನಾಡಿ, ಸದೃಢ ಭಾರತದ ನಿರ್ಮಾಣದಲ್ಲಿ ದೇಶದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಎಲ್ಲರೂ ಕಾರ್ಯಪ್ರವೃತ್ತರಾಗಿ ಆದರ್ಶ ಭಾರತವನ್ನು ನಿರ್ಮಿಸೋಣ ಎಂದರು.

ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಪ್ರಬಂಧ, ಆಶುಭಾಷಣ, ರಸಪ್ರಶ್ನೆ ಹಾಗೂ ರಂಗೋಲಿ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ನಾಗಭೂಷಣ ಕಮಠಾಣೆ, ಮೌಲ್ಯಮಾಪನ ಕುಲಸಚಿವ ಪ್ರೊ.ಪರಮೇಶ್ವರ್ ನಾಯ್ಕ್.ಟಿ, ವಿಶ್ವವಿದ್ಯಾಲಯದ ವಿಶೇಷಾಧಿಕಾರಿ ಡಾ.ರವೀಂದ್ರನಾಥ್ ವಿ.ಗಬಾಡಿ, ಡಾ.ಶಾಂತಕುಮಾರ್ ಚಿದ್ರಿ, ಡಾ.ಶ್ರೀಕೃಷ್ಣ ಚಕ್ರವರ್ತಿ, ಡಾ.ಮುಸ್ತಾಕೀಮ್, ಡಾ.ಅಂಬರೀಶ್ ವೀರನಾಯಕ್ ಹಾಗೂ ಡಾ.ರಾಮಚಂದ್ರ ಗಣಾಪೂರ್ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News