ಬೀದರ್ : ಕೊಡಲಿಯಿಂದ ಕೊಚ್ಚಿ ಮಹಿಳೆಯ ಭೀಕರ ಹತ್ಯೆ
Update: 2026-07-11 15:15 IST
ಬೀದರ್ : ಕೊಡಲಿಯಿಂದ ಕೊಚ್ಚಿ ಮಹಿಳೆಯ ಭೀಕರ ಹತ್ಯೆ ಮಾಡಿದ ಘಟನೆ ಭಾಲ್ಕಿ ತಾಲೂಕಿನ ಹಾಳಗೋರ್ಟಾ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.
ಅನಿತಾ (32) ಎಂಬ ಮಹಿಳೆಯ ಹತ್ಯೆಗೊಳಗಾದ ಮಹಿಳೆ. ಕೈಲಾಸ್ ಬಿರಾದಾರ್ ಎಂಬುವವನು ಕೊಲೆ ಮಾಡಿದ ಆರೋಪಿಯಾಗಿದ್ದಾನೆ.
ಅನಿತಾಳು ಶನಿವಾರ ಬೆಳಿಗ್ಗೆ ಮನೆಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಮನೆಗೆ ನುಗ್ಗಿದ ಕೈಲಾಸ್ ಆಕೆಯನ್ನು ಕೊಡಲಿಯಿಂದ ಕೊಚ್ಚಿ ಕೊಲೆಗೈದಿದ್ದಾನೆ ಎನ್ನಲಾಗಿದೆ. ಜಮೀನು ವಿಚಾರದಲ್ಲಿ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.
ಖಟಕ ಚಿಂಚೋಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.