ಬೀದರ್: ವಿದ್ಯುತ್ ತಗುಲಿ ವಿಬಿ-ಜಿ ರಾಮ್‌ ಜಿ ಯೋಜನೆಯ ಕೂಲಿ ಕಾರ್ಮಿಕೆ ಮೃತಪಟ್ಟ ಘಟನೆ ಭಾಲ್ಕಿ ತಾಲೂಕಿನ ಮದಕಟ್ಟಿ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಮೃತರನ್ನು ಸವಿತಾ ಮಾನೆ (35) ಎಂದು ಗುರುತಿಸಲಾಗಿದೆ.

ಸವಿತಾ ಅವರು ವಿಬಿ-ಜಿ ರಾಮ್‌ ಜಿ ಯೋಜನೆಯಡಿ ಕೂಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಸೋಮವಾರವೂ ಎಂದಿನಂತೆ ಕೆಲಸ ಮುಗಿಸಿ ಮಳೆಯಲ್ಲಿ ನೆನೆದುಕೊಂಡೇ ಮನೆಗೆ ಮರಳಿದ್ದರು. ಈ ವೇಳೆ ಮನೆಯ ತಗಡು ಹಾಗೂ ಬಾಗಿಲಿಗೆ ವಿದ್ಯುತ್ ಹರಿದಿದ್ದ ಹಿನ್ನೆಲೆಯಲ್ಲಿ ಬಾಗಿಲಿನ ಕೀಲಿ ತೆಗೆಯುವಾಗ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸವಿತಾ ಅವರಿಗೆ ಮೂವರು ಮಕ್ಕಳಿದ್ದು, ಕುಟುಂಬ ತೀವ್ರ ಆರ್ಥಿಕ ಸಂಕಷ್ಟದಲ್ಲಿದೆ. ಮೃತರ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಘಟನೆ ಸಂಬಂಧ ಖಟಕ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor