Bidar | ಮಹಿಳಾ ಸಬಲೀಕರಣವೇ ಅಕ್ಕಮಹಾದೇವಿ ಸಹಕಾರ ಸಂಘದ ಮೂಲ ಧ್ಯೇಯ: ಡಾ.ಸಾವಿತ್ರಿಬಾಯಿ ಹೆಬ್ಬಾಳೆ

28ನೇ ವಾರ್ಷಿಕ ಸಾಮಾನ್ಯ ಸಭೆ

Update: 2026-07-27 19:35 IST

ಬೀದರ್: ಮಹಿಳೆಯರು ಇಂದಿನ ಕಾಲದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸ್ವಾವಲಂಬಿಗಳಾಗುತ್ತಿದ್ದು, ಅವರಿಗೆ ಆರ್ಥಿಕ ಸಹಕಾರ ನೀಡುವ ಮೂಲಕ ಮತ್ತಷ್ಟು ಸಬಲೀಕರಣಗೊಳಿಸುವುದೇ ಅಕ್ಕಮಹಾದೇವಿ ಮಹಿಳಾ ಪತ್ತಿನ ಸಹಕಾರ ಸಂಘದ ಮೂಲ ಧ್ಯೇಯವಾಗಿದೆ ಎಂದು ಸಂಘದ ಅಧ್ಯಕ್ಷೆ ಡಾ. ಸಾವಿತ್ರಿಬಾಯಿ ಹೆಬ್ಬಾಳೆ ಹೇಳಿದರು.

ನಗರದ ಕರ್ನಾಟಕ ಸಾಹಿತ್ಯ ಸಂಘದ ಸಾಂಸ್ಕೃತಿಕ ಭವನದಲ್ಲಿ ಭಾನುವಾರ ನಡೆದ ಸಂಘದ 28ನೇ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಂಘದಲ್ಲಿ ಆಕರ್ಷಕ ಬಡ್ಡಿದರದೊಂದಿಗೆ ವಿವಿಧ ಉಳಿತಾಯ ಹಾಗೂ ಸಾಲ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದ್ದು, ಮಹಿಳೆಯರು ಅವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು. 2025-26ನೇ ಸಾಲಿನಲ್ಲಿ ಸಂಘವು ₹26 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಸಂಘದ ಪ್ರಗತಿಗೆ ಸಹಕರಿಸಿದ ಆಡಳಿತ ಮಂಡಳಿ ಸದಸ್ಯರು ಹಾಗೂ ಸದಸ್ಯೆಯರಿಗೆ ಅವರು ಕೃತಜ್ಞತೆ ಸಲ್ಲಿಸಿದರು.

ಪ್ರಸ್ತುತ ಸಂಘದ ಕಚೇರಿ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಮುಂದಿನ ದಿನಗಳಲ್ಲಿ ಸ್ವಂತ ನಿವೇಶನ ಖರೀದಿಸಿ ಸ್ವಂತ ಕಟ್ಟಡ ನಿರ್ಮಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಸ್ವಸಹಾಯ ಮಹಿಳಾ ಸಂಘಗಳಿಗೆ ಸಾಲ ಸೌಲಭ್ಯವನ್ನು ಮತ್ತಷ್ಟು ವಿಸ್ತರಿಸುವ ಮೂಲಕ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಆದ್ಯತೆ ನೀಡುವ ಕುರಿತು ಚರ್ಚೆ ನಡೆಯಿತು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷೆ ಮೀನಾಕ್ಷಿ ತಗಾರೆ, ನಿರ್ದೇಶಕಿ ಶಾಂತಾಬಾಯಿ ಗುಂದಗಿ, ಶಾಂತಾಬಾಯಿ ಗುನ್ನಳ್ಳಿ, ಡಾ. ಜಗದೇವಿ ಸೂರೆ, ಇಂದುಮತಿ ಮಾಳಗೆ, ಸರಸ್ವತಿ ನಾನಾಪೂರೆ, ರೇಖಾ ಹಾದಿಮನಿ, ಶಾಮಲಾ ಎಲಿ, ಅಂಬಿಕಾ ಬಿರಾದಾರ್, ಪಂಕಜಾ ಎಸ್. ಹುಗ್ಗಿ, ಅಂಬಿಕಾ ನಿಣ್ಣೆ, ಶಿವಕುಮಾರ್ ಪರೀಟ್ ಹಾಗೂ ಪರಮೇಶ್ ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಡಾ. ಸುನಿತಾ ಕೂಡ್ಲಿಕರ್ ನಿರೂಪಿಸಿದರು. ಸುನಿತಾ ಬುಡೇರಿ ಸ್ವಾಗತಿಸಿದರು. ಪುಷ್ಪಾವತಿ ಫುಲೇಕರ್ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News