×
Ad

ಬೀದರ್ | ಯುವಕ ಆತ್ಮಹತ್ಯೆ

Update: 2025-06-03 18:31 IST

ಬೀದರ್ : ನೇಣು ಬಿಗಿದುಕೊಂಡು ಯುವಕನೊರ್ವನು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಸವಕಲ್ಯಾಣ ತಾಲ್ಲೂಕಿನ ಗೋಕುಳ್ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ತುಕಾರಾಮ್ ವಗ್ಗೆ (26) ಎಂದು ಗುರುತಿಸಲಾಗಿದೆ.

ಸೋಮವಾರ ಬೆಳಿಗ್ಗೆ ಯುವಕನು ಆತ್ಮಹತ್ಯೆಗೆ ಮಾಡಿಕೊಂಡಿದ್ದು, ಈ ಆತ್ಮಹತ್ಯೆಗೆ ಕಾರಣ ಏನು ಎಂಬುದನ್ನು ತಿಳಿದು ಬಂದಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಬಸವಕಲ್ಯಾಣದ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News