Bidar | ವಿದ್ಯುತ್ ಸ್ಪರ್ಶಿಸಿ ಯುವಕ ಮೃತ್ಯು
Update: 2026-07-16 17:45 IST
ಬೀದರ್ : ಭಾಲ್ಕಿ ತಾಲೂಕಿನ ಮದಕಟ್ಟಿ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ 24 ವರ್ಷದ ಯುವಕನೊಬ್ಬ ಮೃತಪಟ್ಟಿರುವ ದುರ್ಘಟನೆ ಗುರುವಾರ ನಡೆದಿದೆ.
ಮೃತರನ್ನು ಮಹಾದೇವ್ ವಡಗಾವೆ (24) ಎಂದು ಗುರುತಿಸಲಾಗಿದೆ.
ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿದ್ದರಿಂದ ಮಹಾದೇವ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಯುವಕನ ಅಕಾಲಿಕ ನಿಧನದಿಂದ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಖಟಕ್ ಚಿಂಚೋಳಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಸಾವಿನ ನಿಖರ ಕಾರಣ ಕುರಿತು ತನಿಖೆ ಮುಂದುವರಿಸಿದ್ದಾರೆ.