ಬೀದರ್: ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ರಾಜ್ಯ ಮಹಿಳಾ ಸಮಿತಿಗೆ ಬೀದರ್ ಜಿಲ್ಲೆಯ ರಂಜಿತಾ ಜೈನೂರ್ ಹಾಗೂ ಜಗದೇವಿ ಭಂಡಾರಿ ಆಯ್ಕೆಯಾಗಿದ್ದಾರೆ.

ಅ.8ರಂದು ಚಿಕ್ಕಮಗಳೂರಿನಲ್ಲಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಅವರ ನೇತೃತ್ವದಲ್ಲಿ ನಡೆದ ರಾಜ್ಯಮಟ್ಟದ ಮಹಿಳಾ ಒಕ್ಕೂಟದ ಸರ್ವ ಸದಸ್ಯರ ಸಭೆಯಲ್ಲಿ ಮಹಿಳಾ ಸಮಿತಿಯ ಪುನರ್‌ ರಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಬೀದರ್ ಜಿಲ್ಲೆಯಿಂದ ಇಬ್ಬರನ್ನು ರಾಜ್ಯ ಸಮಿತಿಗೆ ಆಯ್ಕೆ ಮಾಡಲಾಗಿದೆ.

ಸಭೆಯಲ್ಲಿ ರಾಜ್ಯ ಸಮಿತಿಯ ಮುಖಂಡ ಮಾವಳ್ಳಿ ಶಂಕರ್, ಇಂದಿರಾ ಕೃಷ್ಣಪ್ಪ, ರಮೇಶ್ ಡಾಕುಳಗಿ, ನಿರ್ಮಲಾ, ರಾಮಣ್ಣ ಕಲ್ದೇವನಹಳ್ಳಿ, ನಾಗಣ್ಣ ಬಡಿಗೇರ್, ಅರ್ಜುನ್‌ ಗೊಬ್ಬೂರು ಸೇರಿದಂತೆ ವಿವಿಧ ರಾಜ್ಯ ಪದಾಧಿಕಾರಿಗಳು ಭಾಗವಹಿಸಿದ್ದರು.

ಬೀದರ್‌ ಜಿಲ್ಲೆಯಿಂದ ನೂತನವಾಗಿ ಆಯ್ಕೆಯಾದ ಇಬ್ಬರು ಮಹಿಳೆಯರು ಸಂಘಟನೆಯ ಆಶಯಗಳಿಗೆ ಅನುಗುಣವಾಗಿ ಮಹಿಳೆಯರ ಹಕ್ಕುಗಳು, ಸಾಮಾಜಿಕ ನ್ಯಾಯ ಮತ್ತು ಸಮಾನತೆಗಾಗಿ ಕಾರ್ಯನಿರ್ವಹಿಸುವ ವಿಶ್ವಾಸವಿದೆ ಎಂದು ಜಿಲ್ಲಾ ಸಂಚಾಲಕ ರಮೇಶ್ ಮಂದಕನಳ್ಳಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor