×
Ad

ಗಾಂಧೀಜಿಯವರನ್ನು ಕಾಂಗ್ರೆಸ್ ಹಲವಾರು ಬಾರಿ ಕೊಲೆ ಮಾಡಿದೆ : ಬಸವರಾಜ್ ಬೊಮ್ಮಾಯಿ ಆರೋಪ

Update: 2025-12-23 10:41 IST

ಬೀದರ್ : ಕಾಂಗ್ರೆಸ್ ಪಕ್ಷವನ್ನು ಗಾಂಧಿಯವರು ವಿಸರ್ಜನೆ ಮಾಡಲು ಹೇಳಿದ್ದರು. ಆದರೆ ನೆಹರು ಅವರು ವಿಸರ್ಜನೆ ಮಾಡಲಿಲ್ಲ. ಅವತ್ತೇ ಗಾಂಧೀಜಿಯವರ ಕೊಲೆ ಆಯ್ತು. ತುರ್ತು ಪರಿಸ್ಥಿತಿಯನ್ನು ಜಾರಿ ಮಾಡಿ ಮತ್ತೊಂದು ಬಾರಿ ಗಾಂಧಿಯನ್ನು ಕೊಲೆ ಮಾಡಿದ್ದರು. ಹೀಗೆ ಕಾಂಗ್ರೆಸ್ ಪಕ್ಷ ಒಂದಲ್ಲ ಹಲವು ಬಾರಿ ಗಾಂಧೀಜಿಯನ್ನು ಕೊಲೆ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಆರೋಪಿಸಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಹಲವಾರು ಬಾರಿ ಗಾಂಧಿ ವಿಚಾರಗಳ ವಿರುದ್ಧ ಕೆಲಸ ಮಾಡಿ ಹಲವು ಬಾರಿ ಗಾಂಧಿಯನ್ನು ಕೊಲೆ ಮಾಡಿದೆ. ಗಾಂಧಿ ಮತ್ತು ರಾಮನನ್ನು ಬೇರೆ ಮಾಡಿ ಕಾಂಗ್ರೆಸ್ ಪಾಪದ ಕೆಲಸ ಮಾಡುತ್ತಿದೆ. ರಾಮ ಬೇರೆಯಲ್ಲ, ಗಾಂಧಿ ಬೇರೆಯಲ್ಲ. ಗಾಂಧೀಜಿಯವರ ಆತ್ಮ ರಾಮನ ಹೆಸರು ಹೇಳುತ್ತದೆ ಎಂದರು.

ರಾಮನ ವಿಚಾರಗಳನ್ನು ಪ್ರತಿಪಾದಿಸಿದ ಗಾಂಧಿ ರಾಮರಾಜ್ಯದ ಪರಿಕಲ್ಪನೆ ಹೇಳಿದ್ದರು. ಗಾಂಧಿಜೀಯ ಆತ್ಮದಲ್ಲಿದ್ದ ರಾಮನ ಹೆಸರನ್ನು ಇವತ್ತು ಉದ್ಯೋಗ ಖಾತ್ರಿಗೆ ಇಟ್ಟಿದ್ದೇವೆ. ಮೊದಲು ಇದಕ್ಕೆ ನೆಹರೂ ಹೆಸರಿತ್ತು. ಚುನಾವಣೆ ಸಂದರ್ಭದಲ್ಲಿ ಅವರು ಗಾಂಧಿಜೀಯವರ ಹೆಸರಿಟ್ಟರು. ಕಾಂಗ್ರೆಸ್ ಪಕ್ಷ ಗಾಂಧಿ ಹೆಸರನ್ನು ಹೇಳಿ ಲಾಭ ಪಡೆಯುತ್ತಿದೆ ಎಂದು ಅವರು ಟೀಕಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News