×
Ad

ಬೀದರ್ ವಿಶ್ವವಿದ್ಯಾಲಯದ ನಕಲಿ ವೆಬ್‌ಸೈಟ್ ಸೃಷ್ಟಿ: ಪ್ರಕರಣ ದಾಖಲು

Update: 2025-09-22 22:16 IST

ಬೀದರ್: ಬೀದರ್ ವಿಶ್ವವಿದ್ಯಾಲಯದ ನಕಲಿ ವೆಬ್‌ಸೈಟ್ ಸೃಷ್ಟಿ ಮಾಡಲಾಗಿದೆ ಎಂದು ಆರೋಪಿಸಿ ವಿಶ್ವವಿದ್ಯಾಲಯದ ಸಿಬ್ಬಂದಿಯೊಬ್ಬರು ದೂರು ನೀಡಿದ್ದು, ಶನಿವಾರ ಪ್ರಕರಣ ದಾಖಲಾಗಿದೆ.

ವಿಶ್ವವಿದ್ಯಾಲಯದ ಗಣಕ ವಿಜ್ಞಾನ ವಿಭಾಗದ ಅತಿಥಿ ಉಪನ್ಯಾಸಕ ನಾಗೇಶ್ ಸಾವಳೆ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ, ನಾನು ಕಳೆದ ಎರಡುವರೆ ವರ್ಷಗಳಿಂದ ಬೀದರ್ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿದ್ದೇನೆ. 2023-24ರಲ್ಲಿ ವಿಶ್ವವಿದ್ಯಾಲಯ ಆರಂಭವಾದಾಗಿನಿಂದ ಅದರ ಹೆಸರಿನಲ್ಲಿ ವೆಬ್‌ಸೈಟ್ ಆರಂಭಿಸಿ ಶೈಕ್ಷಣಿಕ ಚಟುವಟಿಕೆಗಳನ್ನು ನಿರ್ವಹಿಸುತ್ತಿದ್ದೆ. ಸೆ.20ರಂದು ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ ತೆರೆಯುವಾಗ, ಅಲ್ಲಿ ನಕಲಿ ಮತ್ತೊಂದು ವೆಬ್‌ಸೈಟ್ ಕಾಣಿಸಿಕೊಂಡಿತು. ಇದನ್ನು ಬೀದರ್ ವಿಶ್ವವಿದ್ಯಾಲಯದ ಆಡಳಿತ ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ನಗರದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News