ಭಾಲ್ಕಿ: ನಗರದ ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಡಾ. ಗೀತಾ ಈಶ್ವರ್ ಖಂಡ್ರೆ ಅವರಿಗೆ ‘ದಾಸೋಹ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಮುಖಂಡ ಮಹಾದೇವ್ ಬೇಲೂರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಸವಕಲ್ಯಾಣದಲ್ಲಿ ಕಲ್ಯಾಣ ಪರ್ವ ಉತ್ಸವ ಸಮಿತಿ ಹಾಗೂ ಬಸವ ಧರ್ಮಪೀಠದ ಬಸವ ಮಹಾಮನೆ ವತಿಯಿಂದ ಶನಿವಾರ ಸಂಜೆ 6.30ಕ್ಕೆ ಆಯೋಜಿಸಿರುವ 25ನೇ ಕಲ್ಯಾಣ ಪರ್ವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಜಗದ್ಗುರು ಡಾ. ಮಾತೆ ಗಂಗಾದೇವಿ ಅವರ ದಿವ್ಯ ಸಾನ್ನಿಧ್ಯದಲ್ಲಿ ನಡೆಯಲಿರುವ ಕಾರ್ಯಕ್ರಮದ ಮಹಿಳಾ ಗೋಷ್ಠಿಯಲ್ಲಿ ಡಾ.ಗೀತಾ ಈಶ್ವರ್ ಖಂಡ್ರೆ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor