ಔರಾದ್: ಔರಾದ್ (ಬಿ) ಮಂಡಲದ ಬಿಜೆಪಿ ನೂತನ ಪ್ರಧಾನ ಕಾರ್ಯದರ್ಶಿಗಳಾಗಿ ಔರಾದ್‌ನ ದಯಾನಂದ್ ಘೂಳೆ ಹಾಗೂ ಉಜನಿ ಗ್ರಾಮದ ರವೀಂದ್ರ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ ಎಂದು ಮಂಡಲ ಅಧ್ಯಕ್ಷ ಅನಿರುದ್ಧ ಪಿ. ವಾಡೇಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಡಲದ ಹಿರಿಯ ಮುಖಂಡರು ಹಾಗೂ ಪ್ರಮುಖ ಕಾರ್ಯಕರ್ತರೊಂದಿಗೆ ಸುದೀರ್ಘ ಚರ್ಚೆ ಮತ್ತು ಸಮಾಲೋಚನೆ ನಡೆಸಿದ ಬಳಿಕ, ಮುಂಬರುವ ಸಂಘಟನಾ ಅವಧಿಯಲ್ಲಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ನೇಮಕಾತಿ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ್ ಪಾಟೀಲ್ ಅವರು ನೂತನ ಪ್ರಧಾನ ಕಾರ್ಯದರ್ಶಿಗಳ ನೇಮಕಾತಿಗೆ ಅನುಮೋದನೆ ನೀಡಿದ್ದಾರೆ ಎಂದು ಅನಿರುದ್ಧ ಪಿ. ವಾಡೇಕರ್ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor