×
Ad

ಆಲಮ್ ಪಾಷಾ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ: ಡಾ. ಅಬ್ದುಲ್ ಖದೀರ್

Update: 2025-08-13 22:43 IST

 ಶಾಹೀನ್ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಡಾ.ಅಬ್ದುಲ್ ಖದೀರ್

ಬೆಂಗಳೂರು: ‘ಬೆಂಗಳೂರಿನ ಆಲಮ್ ಪಾಷಾ ಎಂಬವರು 6-7 ತಿಂಗಳುಗಳಿಂದ ನಿಂತರವಾಗಿ ಶಾಹೀನ್ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ನನ್ನ ವಿರುದ್ಧ ಆಧಾರ ರಹಿತ ಆರೋಪಗಳನ್ನು ಮಾಡಿಕೊಂಡು ಬರುತ್ತಿದ್ದಾರೆ. ಆದುದರಿಂದ, ಅವರ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಲು ಮುಂದಾಗಿದ್ದೇನೆ’ ಎಂದು ಶಾಹೀನ್ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಡಾ.ಅಬ್ದುಲ್ ಖದೀರ್ ತಿಳಿಸಿದ್ದಾರೆ.

ಬುಧವಾರ ನಗರದ ರಿಚ್ಮಂಡ್ ರಸ್ತೆಯಲ್ಲಿ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ವಕೀಲ ಪಿ.ಉಸ್ಮಾನ್ ಎಂಬವರ ಮೂಲಕ ಆಲಮ್ ಪಾಷಾಗೆ ನೋಟಿಸ್ ಕಳುಹಿಸಿದ್ದೇವೆ. ಮೂರು ದಿನಗಳ ಒಳಗಾಗಿ ಅವರು ಕ್ಷಮೆಯಾಚನೆ ಮಾಡದಿದ್ದರೆ ನಾವು ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡುತ್ತೇವೆ ಎಂದು ಹೇಳಿದರು.

ಸಾಮಾಜಿಕ ಜಾಲತಾಣಗಳಲ್ಲಿ ನಮ್ಮ ಸಂಸ್ಥೆ ಹಾಗೂ ನನ್ನ ತೇಜೋವಧೆ ಆಗುವ ರೀತಿಯಲ್ಲಿ ವೀಡಿಯೊಗಳನ್ನು ಮಾಡಿ ಹಂಚುತ್ತಿರುವುದರ ಹಿಂದಿನ ಉದ್ದೇಶವಾದರು ಏನು?. ವಿದ್ಯಾರ್ಥಿವೇತನದ 15 ಕೋಟಿ ರೂ.ಗಳನ್ನು ನಾನು ದುರುಪಯೋಗ ಪಡಿಸಿಕೊಂಡಿದ್ದೇನೆ ಎಂದು ಆಪಾದನೆ ಮಾಡಿದ್ದಾರೆ. ವಿದ್ಯಾರ್ಥಿವೇತನವನ್ನು ಸರಕಾರ ನೇರವಾಗಿ ಆಯಾ ವಿದ್ಯಾರ್ಥಿಯ ಖಾತೆಗೆ ಜಮೆ ಮಾಡುತ್ತದೆ. ಅದನ್ನು ದುರುಪಯೋಗಪಡಿಸಿಕೊಳ್ಳಲು ಹೇಗೆ ಸಾಧ್ಯ ಎಂದು ಅಬ್ದುಲ್ ಖದೀರ್ ಪ್ರಶ್ನಿಸಿದರು.

ಸುಮಾರು 5 ಸಾವಿರಕ್ಕೂ ಹೆಚ್ಚು ಮದ್ರಸಾ ವಿದ್ಯಾರ್ಥಿಗಳಿಗೆ ಇದರಿಂದ ಅನುಕೂಲ ಆಗಲಿದೆ. ಈಗಾಗಲೆ 3400 ವಿದ್ಯಾರ್ಥಿಗಳಿಗೆ ತರಬೇತಿ ಆರಂಭವಾಗಿದೆ. ಇನ್ನೂ 1,600 ಮಕ್ಕಳ ಪ್ರವೇಶಕ್ಕೆ ಅವಕಾಶವಿದೆ. ಇದು 10 ಕೋಟಿ ರೂ.ಗಳ ಯೋಜನೆಯಾಗಿದೆ. ಇದನ್ನು ನಾವು ದುರುಪಯೋಗಪಡಿಸಿಕೊಂಡಿದ್ದೇವೆ ಎಂದು ಆರೋಪಿಸುವುದು ಎಷ್ಟರಮಟ್ಟಿಗೆ ಸರಿ ಎಂದು ಅವರು ಪ್ರಶ್ನಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News