×
Ad

ಜು.6ರಂದು ಬೀದರ್ ಜಿಲ್ಲೆಗೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಪ್ರವಾಸ

Update: 2026-07-05 18:09 IST

ಡಾ.ಜಿ.ಪರಮೇಶ್ವರ್

ಬೀದರ್: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಜುಲೈ 6ರಂದು ಬೀದರ್ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಬಸವಕಲ್ಯಾಣದ ನೂತನ ಅನುಭವ ಮಂಟಪ ಕಾಮಗಾರಿಯ ಪ್ರಗತಿ ಪರಿಶೀಲನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಉಪಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಕಟಣೆಯ ಪ್ರಕಾರ, ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಬೀದರ್‌ಗೆ ಆಗಮಿಸುವ ಅವರು, ಮಧ್ಯಾಹ್ನ 2.40ಕ್ಕೆ ಹೆಲಿಕಾಪ್ಟರ್ ಮೂಲಕ ಬಸವಕಲ್ಯಾಣಕ್ಕೆ ತೆರಳಲಿದ್ದಾರೆ. ಅಲ್ಲಿ ನೂತನ ಅನುಭವ ಮಂಟಪಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.

ಬಳಿಕ ಸಂಜೆ 4.15ಕ್ಕೆ ಮತ್ತೆ ಬೀದರ್‌ಗೆ ಆಗಮಿಸಿ, ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಪಕ್ಷದ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

ನಂತರ ರಾತ್ರಿ 7.30ಕ್ಕೆ ವಿಶೇಷ ವಿಮಾನದ ಮೂಲಕ ಕಲಬುರಗಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News