ಬೀದರ್–ಯಾದಗಿರಿ ಎಸ್‌ಐಆರ್ ಉಸ್ತುವಾರಿಯಾಗಿ ಧನರಾಜ್ ತಾಳಂಪಳ್ಳಿ ನೇಮಕ

Update: 2026-07-17 18:21 IST

ಬೀದರ್: ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಉಸ್ತುವಾರಿಯಾಗಿ ಕೆಪಿಸಿಸಿ ಸಹಕಾರ ವಿಭಾಗದ ಅಧ್ಯಕ್ಷ ಧನರಾಜ್ ತಾಳಂಪಳ್ಳಿ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಎಸ್‌ಐಆರ್ ಪ್ರಕ್ರಿಯೆಯನ್ನು ಬೂತ್ ಮಟ್ಟದಲ್ಲಿ ಚುನಾವಣಾಧಿಕಾರಿಗಳು ನಿಯಮಾನುಸಾರ ಹಾಗೂ ಪಾರದರ್ಶಕವಾಗಿ ಅನುಷ್ಠಾನಗೊಳಿಸುತ್ತಿರುವುದನ್ನು ಸೂಕ್ಷ್ಮವಾಗಿ ಮೇಲ್ವಿಚಾರಣೆ ಮಾಡುವ ಜವಾಬ್ದಾರಿಯನ್ನು ಧನರಾಜ್ ತಾಳಂಪಳ್ಳಿ ಅವರಿಗೆ ವಹಿಸಲಾಗಿದೆ.

ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳನ್ನು ಎಸ್‌ಐಆರ್ ಕಾರ್ಯಕ್ಕೆ ನಿಯೋಜಿಸಿ, ಪಕ್ಷದಿಂದ ನೇಮಕಗೊಂಡ ಬೂತ್ ಮಟ್ಟದ ಏಜೆಂಟರು (ಬಿಎಲ್‌ಎ-2) ಹಾಗೂ ಚುನಾವಣಾ ಆಯೋಗದ ಬೂತ್ ಮಟ್ಟದ ಅಧಿಕಾರಿಗಳ (ಬಿಎಲ್‌ಒ) ಸಹಕಾರದೊಂದಿಗೆ ಪ್ರತಿ ಮನೆಗೆ ಭೇಟಿ ನೀಡಿ ಎಸ್‌ಐಆರ್ ಪ್ರಕ್ರಿಯೆ ಸುಗಮ ಹಾಗೂ ಪಾರದರ್ಶಕವಾಗಿ ಪೂರ್ಣಗೊಳ್ಳುವಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News