ಜಿಲ್ಲಾ ಉಸ್ತುವಾರಿ ಸಚಿವರ ಭರವಸೆ; ಬೃಹತ್ ಬಹಿರಂಗ ಸಭೆ ಮುಂದೂಡಿಕೆ
ಬೀದರ್ : ಜೂ. 19 ರಂದು ಬೃಹತ್ ಬಹಿರಂಗ ಸಭೆ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರ ಭರವಸೆ ಮೇರೆಗೆ ಈ ಸಭೆಯು ಮುಂದೂಡಲಾಗಿದೆ ಎಂದು ಕರ್ನಾಟಕ ದಲಿತ ಸೇನೆಯ ಕರ್ನಾಟಕ ಭೀಮ ಸೇನೆಯ ರಾಜ್ಯ ಕಾರ್ಯದರ್ಶಿ ವಿಷ್ಣುವರ್ಧನ್ ವಾಲ್ದೊಡ್ಡಿ ಅವರು ತಿಳಿಸಿದರು.
ಇಂದು ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅಂಬೇಡ್ಕರ್ ಅವರ ಪ್ರತಿಮೆಗಳಿಗೆ ಅವಮಾನ ಮಾಡುತ್ತಿರುವ ಘಟನೆಗಳು ಹೆಚ್ಚಾಗಿ ನಡೆಯುತ್ತಿವೆ. ಹಾಗೆಯೇ ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ ಮಾಡುವುದು ಹೆಚ್ಚಾಗಿ ಕಂಡು ಬರುತ್ತಿದೆ. ಅದೇ ರೀತಿ ಹೋರಾಟಗಾರರ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗುತ್ತಿದೆ. ಇವುಗಳ ವಿರುದ್ಧ ನಾವು ಬೃಹತ್ ಮಟ್ಟದಲ್ಲಿ ಬೀದರ್ ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದೆವು. ಆದರೆ ಆ ಪ್ರತಿಭಟನೆ ಅಥವಾ ಬಹಿರಂಗ ಸಭೆ ಮುಂದೂಡಲಾಗಿದೆ ಎಂದು ಅವರು ತಿಳಿಸಿದರು.
ಈ ವಿಷಯಗಳು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರ ಗಮನಕ್ಕೆ ತಂದಿದ್ದೇವೆ. ಅವರು ವೇದಿಕೆ ಸಜ್ಜುಗೊಳಿಸಿ ಬಹಿರಂಗ ಸಭೆಯಲ್ಲಿ ಅಂಬೇಡ್ಕರ್ ಅವರನ್ನು ಅವಮಾನ ಮಾಡುವ, ಜಾತಿ ನಿಂದನೆ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹಾಗೆಯೇ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಆಶ್ವಾಸನೆ ನೀಡಿದ್ದಾರೆ. ಅವರ ಭರವಸೆ ಮೇರೆಗೆ ಶೀಘ್ರದಲ್ಲಿಯೇ ದಿನಾಂಕ ನಿಗದಿಪಡಿಸಿ, ಬಹಿರಂಗ ಸಭೆ ಏರ್ಪಡಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ನಾಗಸೇನ್ ಬನ್ನೇರ್, ಲಕ್ಷ್ಮಣ ಕಾಂಬ್ಳೆ, ಅಂಬರೀಷ್ ಕುದರೆ ಹಾಗೂ ಸಂದೀಪ್ ಅವರು ಉಪಸ್ಥಿತರಿದ್ದರು.