ಅ.29ರಂದು ಬೀದರ್ನಲ್ಲಿ ಜಿಲ್ಲಾ ಮಟ್ಟದ ಯುವ ಸಂಸತ್ತು ಕಾರ್ಯಕ್ರಮ
ಸಾಂದರ್ಭಿಕ ಚಿತ್ರ
ಬೀದರ್: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ತ ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಯುವ ಸಂಸತ್ತು ಕಾರ್ಯಕ್ರಮದ ಪೂರ್ವಾಭ್ಯಾಸವನ್ನು ಅಕ್ಟೋಬರ್ 29ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಕಾಲೇಜುಗಳ 112ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿಧಾನಸಭೆಯ ಮಾದರಿಯಲ್ಲಿ ಭಾಗವಹಿಸಿ, ಜಿಲ್ಲೆಗೆ ಸಂಬಂಧಿಸಿದ ವಿವಿಧ ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ ಹಾಗೂ ವಿಷಯ ಮಂಡನೆ ಮಾಡಲಿದ್ದಾರೆ.
ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮವಾಗಿ ವಿಷಯ ಮಂಡಿಸುವ ಮೂವರು ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಗುವುದು. ಅಲ್ಲದೆ, ಪ್ರತಿ ವಿಧಾನಸಭಾ ಕ್ಷೇತ್ರದಿಂದ ಒಬ್ಬ ವಿದ್ಯಾರ್ಥಿಯನ್ನು ರಾಜ್ಯ ಮಟ್ಟದ ಯುವ ಸಂಸತ್ತು ಕಾರ್ಯಕ್ರಮಕ್ಕೆ ಆಯ್ಕೆ ಮಾಡಿ ಕಳುಹಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.